ಮೊಹಮ್ಮದ್ ಶಮಿ ವಿರುದ್ಧ ಮಹಿಳೆಯಿಂದ ಕಿರುಕುಳ ಆರೋಪ, ಶಮಿ ವಿರುದ್ಧ ಮುಗಿಬಿದ್ದ ನೆಟಿಗರು!
ಕ್ರಿಕೆಟಿಗ ಮೊಹಮ್ಮದ್ ಶಮಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಮಹಿಳೆಯರನ್ನೇ ಫಾಲೋ ಮಾಡುತ್ತಾನೆ. ಆತ ಲಫಂಗಾ ಎಂದು ಜರಿದಿದ್ದು ಇದಕ್ಕೆ ಪುಷ್ಟಿ ನೀಡುವಂತೆ ಮಹಿಳೆಯೊಬ್ಬರು ಶಮಿ ನನಗೆ...

Published On :
ಕ್ರಿಕೆಟಿಗ ಮೊಹಮ್ಮದ್ ಶಮಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಮಹಿಳೆಯರನ್ನೇ ಫಾಲೋ ಮಾಡುತ್ತಾನೆ. ಆತ ಲಫಂಗಾ ಎಂದು ಜರಿದಿದ್ದು ಇದಕ್ಕೆ ಪುಷ್ಟಿ ನೀಡುವಂತೆ ಮಹಿಳೆಯೊಬ್ಬರು ಶಮಿ ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು ಸ್ವತಃ ಪತ್ನಿಯೇ ಕ್ರಿಕೆಟಿಗ ಮೊಹಮ್ಮದ್ ಶಮಿ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಇದೀಗ ಸೋಫಿಯಾ ಎಂಬಾಕೆ ವಿನಾಃ ಕಾರಣ ಮೊಹಮ್ಮದ್ ಶಮಿ ನನಗೆ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. 1.4 ಮಿಲಿಯನ್ ಹಿಂಬಾಲಕರನ್ನು ಹೊಂದಿರುವ ಅವರು ನನ್ನೊಬ್ಬಳಿಗೇಕೆ ಸಂದೇಶಗಳನ್ನು ರವಾನಿಸುತ್ತಿದ್ದಾರೆ. ಇದು ನನಗೆ ಮಾನಸಿಕವಾಗಿ ಕಿರುಕುಳ ಅನುಭವಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಸದ್ಯ ಸೋಫಿಯಾ ಮಾಡಿರುವ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಲ್ಲದೆ ಮೊಹಮ್ಮದ್ ಶಮಿ ವಿರುದ್ಧ ನೆಟಿಗರು ರೊಚ್ಚಿಗೆದಿದ್ದಾರೆ.
ಮೊಹಮ್ಮದ್ ಶಮಿ ಟಿಕ್ ಟಾಕ್ ಅಕೌಂಟ್ ತೆರೆದಿದ್ದಾನೆ. ಆತ ಒಟ್ಟಾರೆ 97 ಮಂದಿಯನ್ನು ಫಾಲೋ ಮಾಡುತ್ತಿದ್ದು ಅದರಲ್ಲಿ 90 ಮಂದಿ ಹುಡುಗಿಯರದ್ದೆ. ಒಂದು ಮಗುವಿನ ತಂದೆಯಾಗಿ ಇದು ನಾಚಿಕೆಗೇಡು. ಆತ ಲಫಂಗ ಎಂದು ಪೋಸ್ಟ್ ಮಾಡಿದ್ದರು.
ಸದ್ಯ ವಿಶ್ವಕಪ್ ಟೂರ್ನಿಯಲ್ಲಿ ಆಡುತ್ತಿರುವ ಮೊಹಮ್ಮದ್ ಶಮಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು 4 ಪಂದ್ಯಗಳಲ್ಲೇ 14 ವಿಕೆಟ್ ಪಡೆದಿದ್ದಾರೆ.
Sounds like an amazing guy... pic.twitter.com/f3QFAZPq9a
— Ryan
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


