ಕ್ರಿಕೆಟ್

ಕೊಹ್ಲಿ, ರವಿಶಾಸ್ತ್ರಿ ಅವರೊಂದಿಗೆ ನಿರ್ವಾಹಕ ಸಮಿತಿಯಿಂದ ವಿಶ್ವಕಪ್ ವಿಮರ್ಶೆ ಸಭೆ!

ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಪ್ರದರ್ಶನ ಕುರಿತು ಸುಪ್ರೀಂ ಕೋರ್ಟ್ ನೇಮಿತ ಬಿಸಿಸಿಐ ನಿರ್ವಾಹಕ ಸಮಿತಿ ತಂಡ ಸ್ವದೇಶಕ್ಕೆ ಮರಳುತ್ತಿದ್ದಂತೆ ಟೀಂ ಇಂಡಿಯಾ...

ಕೊಹ್ಲಿ, ರವಿಶಾಸ್ತ್ರಿ ಅವರೊಂದಿಗೆ ನಿರ್ವಾಹಕ ಸಮಿತಿಯಿಂದ ವಿಶ್ವಕಪ್ ವಿಮರ್ಶೆ ಸಭೆ!
ರವಿ ಶಾಸ್ತ್ರಿ-ವಿರಾಟ್ ಕೊಹ್ಲಿ
Published On :
ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಪ್ರದರ್ಶನ ಕುರಿತು ಸುಪ್ರೀಂ ಕೋರ್ಟ್ ನೇಮಿತ ಬಿಸಿಸಿಐ ನಿರ್ವಾಹಕ ಸಮಿತಿ ತಂಡ ಸ್ವದೇಶಕ್ಕೆ ಮರಳುತ್ತಿದ್ದಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿ ಅವರೊಂದಿಗೆ ಸಭೆ ನಡೆಸಲಿದೆ. 
ನಿರ್ವಾಹಕ ಸಮಿತಿ ಮುಖ್ಯಸ್ಥ ವಿನೋದ್ ರಾಯ್, ಡಯಾನಾ ಎಡುಲ್ಜಿ ಮತ್ತು ಮಾಜಿ ಲೆಫ್ಟಿನೆಂಟ್ ಜನರಲ್ ರವಿ ತೊಡ್ಗೆ ಅವರು ಸಹ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಜೊತೆ ಸಭೆ ನಡೆಸಲಿದ್ದು ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ಭಾರತ ತಂಡದ ಆಯ್ಕೆ ಕುರಿತು ಚರ್ಚಿಸಲಿದ್ದಾರೆ. 
ನ್ಯೂಜಿಲ್ಯಾಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ 18 ರನ್ ಗಳಿಂದ ರೋಚಕ ಸೋಲು ಕಂಡಿತ್ತು. ಇನ್ನು ಸೆಮಿಫೈನಲ್ ನಲ್ಲಿ ಭಾರತ ವಿರುದ್ಧ ಗೆಲುವು ಸಾಧಿಸಿರುವ ನ್ಯೂಜಿಲ್ಯಾಂಡ್ ಭಾನುವಾರ ಇಂಗ್ಲೆಂಡ್ ವಿರುದ್ಧ ಫೈನಲ್ ಪಂದ್ಯದಲ್ಲಿ ಸೆಣೆಸಲಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.