ವಿಶ್ವಕಪ್‌ನಿಂದ ಭಾರತ ಹೊರಕ್ಕೆ: ಕೊಹ್ಲಿ ಬದಲಿಗೆ ರೋಹಿತ್ ಶರ್ಮಾಗೆ ನಾಯಕ ಪಟ್ಟ?
ವಿಶ್ವಕಪ್ ಟೂರ್ನಿಯಿಂದ ಭಾರತ ಹೊರ ಬಿದ್ದ ಬೆನ್ನಲ್ಲೇ ಇದೀಗ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.

Published On :
ಮುಂಬೈ: ವಿಶ್ವಕಪ್ ಟೂರ್ನಿಯಿಂದ ಭಾರತ ಹೊರ ಬಿದ್ದ ಬೆನ್ನಲ್ಲೇ ಇದೀಗ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಏಕದಿನ, ಟಿ20 ಹಾಗೂ ಟೆಸ್ಟ್ ಸರಣಿಗೆ ವಿರಾಟ್ ಕೊಹ್ಲಿ ಮತ್ತು ಜಸ್ ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದ್ದು ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.
ವಿರಾಟ್ ಕೊಹ್ಲಿ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದು ಅವರಿಗೆ ವಿಶ್ರಾಂತಿ ನೀಡಲು ಆಯ್ಕೆ ಸಮಿತಿ ಮುಂದಾಗಿದೆ. ಇನ್ನು ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಹಾರ್ದಿಕ್ ಪಾಂಡ್ಯಗೂ ವಿಶ್ರಾಂತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಆಗಸ್ಟ್ 3ರಿಂದ ಟಿ20 ಸರಣಿ ಆರಂಭಗೊಳ್ಳಲಿದ್ದು ತದನಂತರ ಏಕದಿನ ಸರಣಿ ಹಾಗೂ ಆಗಸ್ಟ್ 22ರಿಂದ ಟೆಸ್ಟ್ ಸರಣಿ ನಡೆಯಲಿದೆ. ವಿಂಡೀಸ್ ವಿರುದ್ಧ ಮೂರು ಟಿ20, ಮೂರು ಏಕದಿನ ಸರಣಿ ಹಾಗೂ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿRohit Sharmaರೋಹಿತ್ ಶರ್ಮಾವಿಶ್ವಕಪ್ ಟೂರ್ನಿWest indiesವೆಸ್ಟ್ ಇಂಡೀಸ್World Cup exit
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


