ವಿಶ್ವಕಪ್ ಫೈನಲ್: ನ್ಯೂಜಿಲ್ಯಾಂಡ್-ಇಂಗ್ಲೆಂಡ್ ನಡುವೆ ರೋಚಕ ಟೈ, ಸೂಪರ್ ಓವರ್!
ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ನ್ಯೂಜಿಲ್ಯಾಂಡ್ ಮತ್ತು ಆತಿಥೇಯ ಇಂಗ್ಲೆಂಡ್ ನಡುವೆ ರೋಚಕ ಟೈ ಆಗಿದೆ.

Published On :
ಲಂಡನ್: ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ನ್ಯೂಜಿಲ್ಯಾಂಡ್ ಮತ್ತು ಆತಿಥೇಯ ಇಂಗ್ಲೆಂಡ್ ನಡುವೆ ರೋಚಕ ಟೈ ಆಗಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ ನಿಗದಿತ ಓವರ್ ನಲ್ಲಿ 8 ವಿಕೆಟ್ ಕಳೆದುಕೊಂಡು 241 ರನ್ ಮಾತ್ರ ಪೇರಿಸಿತ್ತು. ಇನ್ನು 242 ರನ್ ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಸಹ ನಿಗದಿತ ಓವರ್ ಮುಕ್ತಾಯಕ್ಕೆ 241 ರನ್ ಪೇರಿಸಿ ಪಂದ್ಯವನ್ನು ಟೈ ಮಾಡಿಕೊಂಡಿದೆ.
ನ್ಯೂಜಿಲ್ಯಾಂಡ್ ಪರ ಮಾರ್ಟಿನ್ ಗುಪ್ಟಿಲ್ 19, ನಿಕೋಲಾಸ್ 55, ಕೇನ್ ವಿಲಿಯಮ್ಸನ್ 30, ಲ್ಯಾಥಂ 47, ನಿಶಾಮ್ 19 ರನ್ ಬಾರಿಸಿದ್ದಾರೆ.
ಇಂಗ್ಲೆಂಡ್ ಪರ ಬೌಲಿಂಗ್ ನಲ್ಲಿ ಪ್ಲುಂಕೆಟ್ ಮತ್ತು ವೋಕ್ಸ್ ತಲಾ 3 ವಿಕೆಟ್ ಪಡೆದಿದ್ದಾರೆ. ಆರ್ಚರ್ ಮತ್ತು ಮಾರ್ಕ್ ವುಡ್ ತಲಾ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


