ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ: ಏಕದಿನ, ಟಿ-20ಯಿಂದ ಬೂಮ್ರಾಗೆ ವಿಶ್ರಾಂತಿ
ಆಗಸ್ಟ್ 3ರಿಂದ ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಎರಡು ಟೆಸ್ಟ್, ಮೂರು ಏಕದಿನ ಹಾಗೂ ಮೂರು ಟಿ-20 ಪಂದ್ಯಗಳಿಗಾಗಿ ಭಾರತೀಯ ತಂಡವನ್ನು ಇಂದು ಪ್ರಕಟಿಸಲಾಗಿದೆ.

Published On :
ನವದೆಹಲಿ: ಆಗಸ್ಟ್ 3ರಿಂದ ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಎರಡು ಟೆಸ್ಟ್, ಮೂರು ಏಕದಿನ ಹಾಗೂ ಮೂರು ಟಿ-20 ಪಂದ್ಯಗಳಿಗಾಗಿ ಭಾರತೀಯ ತಂಡವನ್ನು ಇಂದು ಪ್ರಕಟಿಸಲಾಗಿದೆ.
ವಿರಾಟ್ ಕೊಹ್ಲಿ ಈ ತಂಡವನ್ನು ಮುನ್ನಡೆಸಲಿದ್ದು, ಧೋನಿ ರಜೆಯಲ್ಲಿರುವ ಕಾರಣ ರಿಷಭ್ ಪಂತ್ ಅವರಿಗೆ ವಿಕೆಟ್ ಕೀಪರ್ ಸ್ಥಾನ ನೀಡಲಾಗಿದೆ.
ವೇಗಿ ಜಸ್ಪ್ರೀತ್ ಬೂಮ್ರಾಗೆ ಏಕದಿನ ಹಾಗೂ ಟಿ-20 ಪಂದ್ಯಗಳಿಂದ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ಸಭೆಯ ಬಳಿಕ ಆಯ್ಕೆದಾರರ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಟೆಸ್ಟ್ ಪಂದ್ಯಗಳಿಗೆ ಭಾರತದ ತಂಡ ಹೀಗಿದೆ: ವಿರಾಟ್ ಕೊಹ್ಲಿ ( ನಾಯಕ) ರಹಾನೆ ( ಉಪನಾಯಕ) ಮಾಯಾಂಕ್ ಅಗರ್ ವಾಲ್, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರೋಹಿತ್ ಶರ್ಮಾ, ರಿಷಬ್ ಪಂತ್ ( ವಿಕೆಟ್ ಕೀಪರ್ ) ವೃದ್ದಿಮನ್ ಸಹಾ ( ವಿಕೆಟ್ ಕೀಪರ್ ) ಆರ್. ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪೀತ್ ಬೂಮ್ರಾ, ಉಮೇಶ್ ಯಾದವ್
ಏಕದಿನ ಪಂದ್ಯಕ್ಕಾಗಿ ಭಾರತದ ತಂಡ ಇಂತಿದೆ: ವಿರಾಟ್ ಕೊಹ್ಲಿ ( ನಾಯಕ ) ರೋಹಿತ್ ಶರ್ಮಾ ( ಉಪನಾಯಕ) ಶಿಖರ್ ಧವನ್, ಕೆಎಲ್ ರಾಹುಲ್, ಶ್ರೇಯಸ್ಸ್ ಅಯ್ಯರ್, ಮನಿಷ್ ಪಾಂಡೆ, ರಿಷಬ್ ಪಂತ್ ( ವಿಕೆಟ್ ಕೀಪರ್ ) ಜಡೇಜಾ, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಕೇದಾರ್ ಜಾದವ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್ , ನವದೀಪ್ ಸೈನಿ
ಟಿ-20 ಪಂದ್ಯಗಳಿಗೆ ಟೀಂ ಇಂಡಿಯಾ ಇಂತಿದೆ: ವಿರಾಟ್ ಕೊಹ್ಲಿ ( ನಾಯಕ ) ರೋಹಿತ್ ಶರ್ಮಾ ( ಉಪನಾಯಕ) ಶಿಖರ್ ಧವನ್, ಕೆಎಲ್ ರಾಹುಲ್, ಶ್ರೇಯಸ್ಸ್ ಅಯ್ಯರ್, ಮನಿಷ್ ಪಾಂಡೆ, ರಿಷಬ್ ಪಂತ್ ( ವಿಕೆಟ್ ಕೀಪರ್ ) ಕೃನಾಲ್ ಪಾಂಡೆ, ಜಡೇಜಾ, ವಾಷಿಂಗ್ಟನ್ ಸುಂದರ್, ರಾಹುಲ್ ಚಾಹರ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ದೀಪಕ್ ಚಾಹರ್, ನವದೀಪ್ ಸೈನಿ ಇದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


