ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ಅಗ್ರಪಟ್ಟ ಕಾಯ್ದುಕೊಂಡ ವಿರಾಟ್ ಕೊಹ್ಲಿ, ಟೀಂ ಇಂಡಿಯಾ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಮಂಳವಾರ ನೂತನ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಅಗ್ರಸ್ಥಾನ...

Published On :
ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಮಂಳವಾರ ನೂತನ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಬೌಲಿಂಗ್ ನಲ್ಲಿ ರವೀಂದ್ರ ಜಡೇಜ 6ನೇ ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ವಿರಾಟ್ ಕೊಹ್ಲಿ ಒಟ್ಟು 922 ಅಂಕಗಳನ್ನು ಕಲೆ ಹಾಕಿದ್ದಾರೆ. ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಜೋ ರೂಟ್ ಆರನೇ ಸ್ಥಾನದಲ್ಲಿದ್ದಾರೆ. ಜಾನಿ ಬೈರ್‌ಸ್ಟೋವ್ ಮತ್ತು ಜೋಸ್ ಬಟ್ಲರ್ 26 ಮತ್ತು 27 ನೇ ಸ್ಥಾನದಲ್ಲಿದ್ದಾರೆ.
ಎರಡನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ 913 ಅಂಕ ಸಂಪಾದಿಸಿದ್ದಾರೆ. .ಚೇತೇಶ್ವರ ಪೂಜಾರ (881) ಮೂರು, ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ (857) ನಾಲ್ಕನೇ ಮತ್ತು ನ್ಯೂಜಿಲೆಂಡ್‌ನ ಹೆನ್ರಿ ನಿಕೋಲ್ಸ್ (778) ಐದನೇ ಸ್ಥಾನದಲ್ಲಿದ್ದಾರೆ.
ತಂಡ ರ‍್ಯಾಂಕಿಂಗ್ ಪಟ್ಟಿಯಲ್ಲೂ ಭಾರತ ಅಗ್ರಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ಅನುಕ್ರಮವಾಗಿ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ಹಂಚಿಕೊಂಡಿವೆ.
ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ಮತ್ತು ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕ್ರಮವಾಗಿ ಆರನೇ ಮತ್ತು 10 ನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ (878) ಅಗ್ರಸ್ಥಾನ ಮುಂದುವರೆದಿದ್ದಾರೆ. ಇಂಗ್ಲೆಂಡ್‌ನ ಜೇಮ್ಸ್ ಆಂಡರ್ಸನ್ (862) ಎರಡನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಕಗಿಸೊ ರಬಾಡಾ (851), ವೆರ್ನಾನ್ ಫಿಲಾಂಡರ್ (813), ನಾಲ್ಕನೇ ಮತ್ತು ನ್ಯೂಜಿಲೆಂಡ್‌ನ ನೀಲ್ ವ್ಯಾಗ್ನರ್ (801) ಐದನೇ ಸ್ಥಾನದಲ್ಲಿದ್ದಾರೆ. ಜೇಮ್ಸ್ ಆಂಡರ್ಸನ್ ಹಾಗೂ ಸ್ಟುವರ್ಟ್ ಬ್ರಾಡ್ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ 19 ಹಾಗೂ 20 ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಇಂಗ್ಲೆಂಡ್ ನ ಮೊಯಿನ್ ಅಲಿ 25 ನೇ ಸ್ಥಾನದಲ್ಲಿದ್ದಾರೆ.
ಅಂತೆಯೇ ಆಲ್‌ರೌಂಡರ್ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಮೂರನೇ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


