ಕೊನೆಗೂ ವಿರಾಟ್ ಕೊಹ್ಲಿ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ 'ಹಿಟ್' ಮ್ಯಾನ್ ರೋಹಿತ್ ಶರ್ಮಾ
ಐಸಿಸಿ ವಿಶ್ವಕಪ್ ನಲ್ಲಿ ಭರ್ಜರಿ ಫಾರ್ಮ್ ನಲ್ಲಿ ಬ್ಯಾಟ್ ಬೀಸಿದ್ದ 'ಹಿಟ್' ಮ್ಯಾನ್ ರೋಹಿತ್ ಶರ್ಮಾ ಕೊನೆಗೂ ರನ್ ಮೆಷಿನ್ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ.

Published On :
ನವದೆಹಲಿ: ಐಸಿಸಿ ವಿಶ್ವಕಪ್ ನಲ್ಲಿ ಭರ್ಜರಿ ಫಾರ್ಮ್ ನಲ್ಲಿ ಬ್ಯಾಟ್ ಬೀಸಿದ್ದ 'ಹಿಟ್' ಮ್ಯಾನ್ ರೋಹಿತ್ ಶರ್ಮಾ ಕೊನೆಗೂ ರನ್ ಮೆಷಿನ್ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ.
2019ನೇ ಸಾಲಿನಲ್ಲಿ ಏಕದಿನ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರ ಸ್ಥಾನ ಗಳಿಸಿದ್ದಾರೆ. 2019ರ ಏಕದಿನ ಪಂದ್ಯಗಳಲ್ಲಿ ಟೀಂ ಇಂಡಿಯಾ ಪರ ಅತಿ ಹೆಚ್ಚು ರನ್ ಗಳಿಸಿ ರೋಹಿತ್ ಶರ್ಮಾ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. 2019ರಲ್ಲಿ ಒಟ್ಟು 22 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ 57.33 ಸರಾಸರಿಯಲ್ಲಿ ಒಟ್ಟು 1204 ರನ್ ಗಳಿಸಿದ್ದಾರೆ. ಆ ಮೂಲಕ ಪ್ರಸಕ್ತ ಸಾಲಿನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.
ಇತ್ತೀಚೆಗಷ್ಟೇ ಮುಕ್ತಾಯವಾದ ಏಕದಿನ ವಿಶ್ವಕಪ್ನಲ್ಲಿ ರೋಹಿತ್ ಶರ್ಮಾ ಶೇ 92.42 ಸರಾಸರಿಯಲ್ಲಿ 647 ರನ್ಗಳನ್ನ ಗಳಿಸಿ ಉತ್ತಮ ಪ್ರದರ್ಶನ ನೀಡಿದ್ದರು.
ಇನ್ನು 2ನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಆ್ಯರಾನ್ ಫಿಂಚ್ ಇದ್ದು, 23 ಪಂದ್ಯಗಳಿಂದ ಫಿಂಚ್ 1141 ರನ್ ಗಳಿಸಿದ್ದಾರೆ. 3ನೇ ಸ್ಥಾನದಲ್ಲಿ ಇದೇ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಉಸ್ಮಾನ್ ಖವಾಜ ಇದ್ದು, 22 ಪಂದ್ಯಗಳಿಂದ 1085 ರನ್ ಗಳಿಸಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಇದ್ದು, ಕೊಹ್ಲಿ ಒಟ್ಟು 20 ಪಂದ್ಯಗಳಿಂದ 55.47 ಸರಾಸರಿಯಲ್ಲಿ 1054 ರನ್ ಗಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


