ಕೊಹ್ಲಿ-ಅನುಷ್ಕಾ ಜೊತೆ ಮನಸ್ತಾಪ..?; ಇನ್ ಸ್ಟಾಗ್ರಾಮ್ ನಲ್ಲಿ ಅನ್ ಫಾಲೋ ಮಾಡಿದ ರೋಹಿತ್ ಶರ್ಮಾ
ವಿಶ್ವಕಪ್ ಟೂರ್ನಿ ಸೋಲಿನ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪನಾಯಕ ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವಾದಕ್ಕೆ ಪುಷ್ಟಿ ನೀಡುವಂತಹ ಸುದ್ದಿಯೊಂದು ಹರಿದಾಡುತ್ತಿದೆ.

Published On :
ನವದೆಹಲಿ: ವಿಶ್ವಕಪ್ ಟೂರ್ನಿ ಸೋಲಿನ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪನಾಯಕ ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವಾದಕ್ಕೆ ಪುಷ್ಟಿ ನೀಡುವಂತಹ ಸುದ್ದಿಯೊಂದು ಹರಿದಾಡುತ್ತಿದೆ.
ಟೀಂ ಇಂಡಿಯಾದ ಇಬ್ಬರು ದಿಗ್ಗಜ ಬ್ಯಾಟ್ಸ್ ಮನ್ ಗಳ ಪರಸ್ಪರ ಮನಸ್ತಾಪಗೊಂಡಿದ್ದಾರೆ ಎಂಬ ಊಹಾಪೋಹಗಳ ನಡುವೆಯೇ ಖ್ಯಾತ ಸಾಮಾಜಿಕ ಜಾಲತಾಣಗಳಾದ ಇನ್ ಸ್ಟಾಗ್ರಾಮ್ ಮತ್ತು ಟ್ವಿಟರ್ ನಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಖಾತೆಗಳನ್ನು ಅನ್ ಫಾಲೋ ಮಾಡಿದ್ದಾರೆ. ಆ ಮೂಲಕ ಊಹಾಪೋಹಗಳಿಗೆ ಮತ್ತಷ್ಟು ತುಪ್ಪ ಸುರಿದಿದ್ದಾರೆ. ಅಚ್ಚರಿ ಎಂದರೆ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೆ ಅವರೂ ಕೂಡ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾರನ್ನು ಫಾಲೋ ಮಾಡುತ್ತಿಲ್ಲ. ಆದರೆ ಅನುಷ್ಕಾ ಶರ್ಮಾ ಕೂಡ ರೋಹಿತ್ ಮತ್ತು ಅವರ ಪತ್ನಿ ಇಬ್ಬರನ್ನೂ ಫಾಲೋ ಮಾಡುತ್ತಿಲ್ಲ. ಆದರೆ ವಿರಾಟ್ ಕೊಹ್ಲಿ ಮಾತ್ರ ರೋಹಿತ್ ಶರ್ಮಾ ಅವರ ಖಾತೆಯನ್ನು ಫಾಲೋ ಮಾಡುತ್ತಿದ್ದು, ಅವರ ಪತ್ನಿ ರಿತಿಕಾ ಅವರ ಖಾತೆಯನ್ನು ಫಾಲೋ ಮಾಡುತ್ತಿಲ್ಲ.
ಟೀಂ ಇಂಡಿಯಾದಲ್ಲಿ 2 ಬಣಗಳ ಸೃಷ್ಟಿ
ಟೀಂ ಇಂಡಿಯಾ ಡ್ರೆಸಿಂಗ್ ರೂಂ ಮೂಲಗಳು ತಿಳಿಸಿರುವಂತೆ ತಂಡದಲ್ಲಿ 2 ಬಣಗಳು ಸೃಷ್ಟಿಯಾಗಿದ್ದು, ಒಂದು ವಿರಾಟ್ ಕೊಹ್ಲಿಯದ್ದಾಗಿದ್ದರೆ ಮತ್ತೊಂದು ರೋಹಿತ್ ಶರ್ಮಾ ಬಣವಂತೆ. ಈ ಎರಡು ಬಣಗಳ ಒತ್ತಾಯದ ಮೇರೆಗೆ ತಂಡದ ಆಯ್ಕೆಯಾಗುತ್ತದೆ ಎಂಬ ಸುದ್ದಿಯೂ ಹರಿದಾಡುತ್ತಿದೆ.
ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ತಂಡದ ಆಡಳಿತ ಮಂಡಳಿ, ಇಂತಹ ಊಹಾಪೋಹಗಳೆಲ್ಲ ಸುಳ್ಳು. ಆಟಗಾರರ ಮಧ್ಯೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ತಂಡದ ಡ್ರೆಸಿಂಗ್ ರೂಂ ಸದಾ ಕ್ರಿಯಾಶೀಲವಾಗಿರುತ್ತದೆ. ಅಲ್ಲಿ ಉತ್ತಮ ಪ್ರದರ್ಶನ ನೀಡಬೇಕು ಎಂಬ ಪೈಪೋಟಿ ಇರುತ್ತದೆಯೇ ಹೊರತು ಭಿನ್ನಾಭಿಪ್ರಾಯಗಳಿಗೆ ಜಾಗವಿರುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ನವದೆಹಲಿNew Delhiಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿRohit Sharmaರೋಹಿತ್ ಶರ್ಮಾBCCIಬಿಸಿಸಿಐ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


