ಕ್ರಿಕೆಟ್

ರೋಹಿತ್-ಕೊಹ್ಲಿ ಮುನಿಸು: ವಿಂಡೀಸ್‌ ಪ್ರವಾಸಕ್ಕೂ ಮುನ್ನ ಭಾರತ ತಂಡದಿಂದ ಸುದ್ದಿಗೋಷ್ಠಿ ಇಲ್ಲ: ಬಿಸಿಸಿಐ

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ಆರಂಭಿಕ ಆಟಗಾರ ರೋಹಿತ್ ಶರ್ಮಾ ನಡುವಿನ ಒಳಜಗಳ ಇದೀಗ ಜಗ್ಗಜಾಹೀರ್ ಆಗಿದ್ದು ಈ ನಡುವೆ ವೆಸ್ಟ್ ಇಂಡೀಸ್ ಪ್ರವಾಸಕ್ಕೂ...

ರೋಹಿತ್-ಕೊಹ್ಲಿ ಮುನಿಸು: ವಿಂಡೀಸ್‌ ಪ್ರವಾಸಕ್ಕೂ ಮುನ್ನ ಭಾರತ ತಂಡದಿಂದ ಸುದ್ದಿಗೋಷ್ಠಿ ಇಲ್ಲ: ಬಿಸಿಸಿಐ
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ
Published On :
ಮುಂಬೈ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ಆರಂಭಿಕ ಆಟಗಾರ ರೋಹಿತ್ ಶರ್ಮಾ ನಡುವಿನ ಒಳಜಗಳ ಇದೀಗ ಜಗ್ಗಜಾಹೀರ್ ಆಗಿದ್ದು ಈ ನಡುವೆ ವೆಸ್ಟ್ ಇಂಡೀಸ್ ಪ್ರವಾಸಕ್ಕೂ ಮುನ್ನ ನಡೆಯಬೇಕಿದ್ದ ಸುದ್ಧಿಗೋಷ್ಠಿಯೇ ರದ್ದಾಗಿದೆ.
ವೆಸ್ಟ್‌ ಇಂಡೀಸ್‌ ಪ್ರವಾಸ ತೆರಳುವ ಮುನ್ನ ಟೀಮ್‌ ಇಂಡಿಯಾ ಯಾವುದೇ ಸುದ್ದಿಗೋಷ್ಠಿ ಹಮ್ಮಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಮೂಲಗಳು ಭಾನುವಾರ ಧೃಡಪಡಿಸಿವೆ. 
ವೆಸ್ಟ್‌ ಇಂಡೀಸ್‌ಗೆ ಪ್ರಯಾಣ ಬೆಳೆಸುವುದಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಲು ಸಾಕಷ್ಟು ಪ್ರಯತ್ನ ಮಾಡಲಾಯಿತು. ಆದರೆ, ಸಾಧ್ಯವಾಗಲಿಲ್ಲ. ಹಾಗಾಗಿ, ಕೆರಿಬಿಯನ್‌ ಪ್ರವಾಸಕ್ಕೂ ಮುನ್ನ ಯಾವುದೇ ಸುದ್ಧಿಗೋಷ್ಠಿ ಇಲ್ಲವೆಂದು" ಬಿಸಿಸಿಐ ಮೂಲಗಳು ಹೇಳಿವೆ. 
ಮೂರು ಪಂದ್ಯಗಳ ಟಿ-20, ಮೂರು ಪಂದ್ಯಗಳ ಏಕದಿನ ಹಾಗೂ ಎರಡು ಪಂದ್ಯಗಳ ಟೆಸ್ಟ್‌ ಸರಣಿ ಆಡಲು ಭಾರತ ಸೋಮವಾರ ವೆಸ್ಟ್‌ ಇಂಡೀಸ್‌ಗೆ ಪ್ರಯಾಣ ಬೆಳೆಸಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.