ವಿಶ್ವಕಪ್ ಸೋಲಿನ ನಂತರವೂ ನಾಯಕಾಗಿ ಕೊಹ್ಲಿ ಮುಂದುವರಿಕೆಗೆ ಗವಾಸ್ಕರ್ ಆಕ್ಷೇಪ!
ವಿಶ್ವಕಪ್ ನ ಸೆಮಿಫೈನಲ್ಸ್ ನಲ್ಲಿ ಭಾರತ ಸೋತ ನಂತರವೂ ವಿರಾಟ್ ಕೊಹ್ಲಿಯನ್ನು ನಾಯಕ ಸ್ಥಾನದಲ್ಲಿ ಮುಂದುವರೆಸಿರುವುದನ್ನು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಪ್ರಶ್ನಿಸಿದ್ದಾರೆ.

Published On :
ನವದೆಹಲಿ: ವಿಶ್ವಕಪ್ ನ ಸೆಮಿಫೈನಲ್ಸ್ ನಲ್ಲಿ ಭಾರತ ಸೋತ ನಂತರವೂ ವಿರಾಟ್ ಕೊಹ್ಲಿಯನ್ನು ನಾಯಕ ಸ್ಥಾನದಲ್ಲಿ ಮುಂದುವರೆಸಿರುವುದನ್ನು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಪ್ರಶ್ನಿಸಿದ್ದಾರೆ.
ಮಿಡ್-ಡೇ ಗೆ ಬರೆದಿರುವ ಅಂಕಣದಲ್ಲಿ ಸುನಿಲ್ ಗವಾಸ್ಕರ್ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ವಿರಾಟ್ ಕೊಹ್ಲಿ ಭಾರತ ಕ್ರಿಕೆಟ್ ತಂಡಕ್ಕೆ ನಾಯಕನಾಗಿ ನೇಮಕಗೊಂಡಿದ್ದು ವಿಶ್ವಕಪ್ ವರೆಗೆ ಮಾತ್ರ. ಆ ನಂತರ ಅವರನ್ನು ಮುಂದುವರೆಸುವುದರ ಬಗ್ಗೆ ಸಣ್ಣ ಸಭೆ ನಡೆಯಬೇಕಿತ್ತು ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.
ಸಭೆಯೇ ನಡೆಯದೇ ವಿರಾಟ್ ಕೊಹ್ಲಿಯನ್ನು ನಾಯಕನ ಸ್ಥಾನಕ್ಕೆ ಮರು ನೇಮಕ ಮಾಡಿರುವುದು, ವಿರಾಟ್ ಕೊಹ್ಲಿ ಅಥವಾ ಆಯ್ಕೆ ಸಮಿತಿಯ ಸಂತೋಷಕ್ಕಾಗಿ ತಂಡದ ನಾಯಕನನ್ನು ಆಯ್ಕೆ ಮಾಡಿದಂತಿದೆ ಎಂದು ಗವಾಸ್ಕರ್ ತೀಕ್ಷ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಎಂಎಸ್ ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ವಿರಾಟ್ ಕೊಹ್ಲಿಯನ್ನು ವೆಸ್ಟ್ ಇಂಡೀಸ್ ವಿರುದ್ಧದ ಎಲ್ಲಾ 3 ಫಾರ್ಮೆಟ್ ಗಳ ಟೂರ್ನಿಗಳಿಗೂ ನಾಯಕನನ್ನಾಗಿ ನೇಮಕ ಮಾಡಿದೆ.
ಗವಾಸ್ಕರ್ ಕೊಹ್ಲಿ ನಾಯಕತ್ವವನ್ನು ಮಾತ್ರ ಪ್ರಶ್ನಿಸದೇ ಕೊಹ್ಲಿಯ ತಂಡದ ಆಯ್ಕೆ ಮಾಡುವ ವಿಧಾನವನ್ನೂ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಭಾರತTeam IndiaVirat Kohliವಿರಾಟ್ ಕೊಹ್ಲಿನಾಯಕತ್ವSunil Gavaskarಸುನಿಲ್ ಗವಾಸ್ಕರ್skipperworld cup-2019ವಿಶ್ವಕಪ್2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


