ಟೀಂ ಇಂಡಿಯಾದಲ್ಲಿ 'ಜಡೆ ಜಗಳ'ವಿಲ್ಲ: ಶಾಸ್ತ್ರಿ
ಭಾರತ ತಂಡದ ಆಟಗಾರರು ಮತ್ತು ಅವರ ಪತ್ನಿಯರ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ. ಅವೆಲ್ಲವೂ ಕೇವಲ ಮಾಧ್ಯಮಗಳ ಕಲ್ಪಿತ ಕಥೆಗಳು ಎಂದು ಟೀಂ ಇಂಡಿಯಾ ಪ್ರಧಾನ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.

Published On :
ನವದೆಹಲಿ: ಭಾರತ ತಂಡದ ಆಟಗಾರರು ಮತ್ತು ಅವರ ಪತ್ನಿಯರ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ. ಅವೆಲ್ಲವೂ ಕೇವಲ ಮಾಧ್ಯಮಗಳ ಕಲ್ಪಿತ ಕಥೆಗಳು ಎಂದು ಟೀಂ ಇಂಡಿಯಾ ಪ್ರಧಾನ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.
ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಅಣಿಯಾಗುತ್ತಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಜೊತೆ ನಿನ್ನೆ ಜಂಟಿ ಸುದ್ದಿಗೋಷ್ಠಿ ನಡೆಸಿದ ರವಿಶಾಸ್ತ್ರಿ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಪತ್ನಿಯರ ನಡುವೆ ಉತ್ತಮ ಬಾಂಧವ್ಯವಿದೆ. ಅವರ ನಡುವೆ ಯಾವುದೇ ರೀತಿಯ ಮನಸ್ಥಾಪ ಇಲ್ಲ ಎಂದು ಹೇಳಿದರು.
ಅಂತೆಯೇ ಅನುಷ್ಕಾರ ಶರ್ಮಾ ಮತ್ತು ರೋಹಿತ್ ಪತ್ಮಿ ರಿತಿಕಾ ಉತ್ತಮ ಸ್ನೇಹಿತರಾಗಿದ್ದು ಅವರ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ. ಇವೆಲ್ಲವೂ ಮಾಧ್ಯಮಗಳ ಸೃಷ್ಟಿ ಎಂದು ಶಾಸ್ತ್ರಿ ಕಿಡಿಕಾರಿದ್ದಾರೆ.
ಇದೇ ವಿಚಾರವಾಗಿ ಮಾತನಾಡಿದ್ದ ಕೊಹ್ಲಿ, ರೋಹಿತ್ ಶರ್ಮಾ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಆದಾಗ್ಯೂ, ಇಂತಹ ವರದಿಗಳು ಗೊಂದಲವನ್ನುಂಟು ಮಾಡುವ ಸುಳ್ಳುಗಳು ಹಾಗೂ ಹಾಸ್ಯಾಸ್ಪದ ಎಂದು ಅವರು ಹೇಳಿದ್ದಾರೆ. ರೋಹಿತ್ ಜೊತೆಗೆ ಸಂಬಂಧ ಉತ್ತಮವಾಗಿದೆ. ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಹಿಂದಿನ ಕೆಲ ದಿನಗಳಲ್ಲಿ ಅನೇಕ ವಿಚಾರಗಳ ಬಗ್ಗೆ ಕೇಳಿದ್ದೇನೆ. ಆದರೆ, ಟೀಂ ನಲ್ಲಿ ಸಂಬಂಧ ಸರಿಯಿಲ್ಲದಿದ್ದರೆ , ಚೆನ್ನಾಗಿ ಪ್ರದರ್ಶನ ನೀಡಲು ಸಾಧ್ಯವಿಲ್ಲ ಎಂದು ಕೊಹ್ಲಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ನವದೆಹಲಿNew DelhiTeam IndiaVirat Kohliವಿರಾಟ್ ಕೊಹ್ಲಿRohit Sharmaರೋಹಿತ್ ಶರ್ಮಾRavi shastriರವಿಶಾಸ್ತ್ರಿಟೀಮ್ ಇಂಡಿಯಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


