ವಿಶ್ವಕಪ್ ಮಹಾಸಮರ: ಇಂಗ್ಲೆಂಡ್ ವಿರುದ್ಧ ಪಾಕ್‌ಗೆ ರೋಚಕ ಗೆಲುವು!
ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ 14 ರನ್ ಗಳಿಂದ ರೋಚಕ ಗೆಲುವು ಸಾಧಿಸಿ ಗೆಲುವಿನ ಲಯಕ್ಕೆ ಮರಳಿದೆ.

Published On :
ಲಂಡನ್: ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ 14 ರನ್ ಗಳಿಂದ ರೋಚಕ ಗೆಲುವು ಸಾಧಿಸಿ ಗೆಲುವಿನ ಲಯಕ್ಕೆ ಮರಳಿದೆ.
ನಾಟಿಂಗ್ ಹ್ಯಾಮ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ 8 ವಿಕೆಟ್ ನಷ್ಟಕ್ಕೆ 348 ರನ್ ಪೇರಿಸಿತ್ತು. 349 ರನ್ ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 334 ರನ್ ಮಾತ್ರ ಪೇರಿಸಿದ್ದು 14 ರನ್ ಗಳಿಂದ ಸೋಲಿಗೆ ಶರಣಾಯಿತು.
ಪಾಕಿಸ್ತಾನ ಪರ ಇಮಾಮ್ ಉಲ್ ಹಕ್ 44, ಬಾಬರ್ ಅಜಾಂ 63, ಮೊಹಮ್ಮದ್ ಹಫೀಜ್ 84 ಮತ್ತು ಸರ್ಫರಾಜ್ ಅಹ್ಮದ್ 55 ರನ್ ಬಾರಿಸಿದ್ದಾರೆ. ಇಂಗ್ಲೆಂಡ್ ಪರ ಬೌಲಿಂಗ್ ನಲ್ಲಿ ವೋಕ್ಸ್ ಮತ್ತು ಮೋಹಿನ್ ಅಲಿ ತಲಾ 3 ವಿಕೆಟ್ ಪಡೆದಿದ್ದಾರೆ.
ಇಂಗ್ಲೆಂಡ್ ಪರ ಜೋ ರೂಟ್ 107, ಜೋಸ್ ಬಟ್ಲರ್ 103 ಮತ್ತು ಬೈರ್ಸ್ಟೋವ್ 32 ರನ್ ಪೇರಿಸಿದ್ದಾರೆ. ಪಾಕ್ ಪರ ಬೌಲಿಂಗ್ ನಲ್ಲಿ ವಹಾಬ್ ರಿಯಾಜ್ 3, ಅಮೀರ್ ಶಬದ್ ಖಾನ್ ತಲಾ 2 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


