ಮೈದಾನದಲ್ಲೇ ನೋಡಿಕೊಳ್ಳುತ್ತೇನೆ: ರಬಾಡಾ ಹೇಳಿಕೆಗೆ ವಿರಾಟ್ ಕೊಹ್ಲಿ ತಿರುಗೇಟು!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅಪ್ರಬುದ್ಧ ನಾಯಕ ಎಂದು ದಕ್ಷಿಣ ಆಫ್ರಿಕಾ ವೇಗಿ ಕಗಿಸೋ ರಬಾಡಾ ಅವರ ಹೇಳಿಕೆಗೆ ಕೊಹ್ಲಿ ತಿರುಗೇಟು ನೀಡಿದ್ದಾರೆ.

Published On :
ಲಂಡನ್: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅಪ್ರಬುದ್ಧ ನಾಯಕ ಎಂದು ದಕ್ಷಿಣ ಆಫ್ರಿಕಾ ವೇಗಿ ಕಗಿಸೋ ರಬಾಡಾ ಅವರ ಹೇಳಿಕೆಗೆ ಕೊಹ್ಲಿ ತಿರುಗೇಟು ನೀಡಿದ್ದಾರೆ.
ವಿಶ್ವಕಪ್ ಟೂರ್ನಿ ಹಿನ್ನೆಲೆಯಲ್ಲಿ ನಾಳೆ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಸೆಣೆಸಲಿದ್ದು ಈ ಮಧ್ಯೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿರಾಟ್ ಕೊಹ್ಲಿ ಯಾವುದೇ ಟೀಕೆಗಳಿಗೆ ಮೈದಾನದಲ್ಲೇ ತಕ್ಕ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ.
ನಾವು ಈ ಸಲ ವಿಶ್ವಕಪ್ ಅನ್ನು ಹಗುರವಾಗಿ ಪರಿಗಣಿಸುವುದಿಲ್ಲ. ಎಲ್ಲಾ ತಂಡಗಳು ಬಲಿಷ್ಠವಾಗಿದೆ. 2017ರ ಚಾಂಪಿಯನ್ ಟ್ರೋಫಿಯಲ್ಲಿ ಮಾಡಿದ ತಪ್ಪುಗಳನ್ನು ತಿದ್ದಿಕೊಂಡಿದ್ದೇವೆ. ಆಫ್ರಿಕಾ ಅತ್ಯಂತ ಅಪಾಯಕಾರಿ ತಂಡ ಎಂದು ಹೇಳಿದರು.
ಇನ್ನು ರಬಾಡಾ ಹೇಳಿಕೆ ಕುರಿತಂತೆ ಹೆಚ್ಚಿಗೆ ನಾನು ಏನನ್ನು ಹೇಳಲುವುದಿಲ್ಲ. ಈ ಬಗ್ಗೆ ಮಾತನಾಡಬೇಕು ಎಂದಿದ್ದರೆ ಇಬ್ಬರು ಜೊತೆಯಾಗಿ ಎದುರು ಕೂತು ಮಾತನಾಡುತ್ತೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿKagiso RabadaWorld Cup 2019ಕಗಿಸೋ ರಬಾಡಾವಿಶ್ವಕಪ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


