ಆಸ್ಟ್ರೇಲಿಯಾ ವಿರುದ್ಧ ಸೋತ ವೆಸ್ಟ್ ಇಂಡೀಸ್!
ಅಂಪೈರ್ ಕೆಟ್ಟ ತೀರ್ಪಿನಿಂದ ವೆಸ್ಟ್ ಇಂಡೀಸ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಬಲಿಯಾಗಿದ್ದು ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 15 ರನ್ ಗಳಿಂದ ಸೋಲು...

Published On :
ಲಂಡನ್: ಅಂಪೈರ್ ಕೆಟ್ಟ ತೀರ್ಪಿನಿಂದ ವೆಸ್ಟ್ ಇಂಡೀಸ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಬಲಿಯಾಗಿದ್ದು ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 15 ರನ್ ಗಳಿಂದ ಸೋಲು ಕಂಡಿದೆ.
ನಾಟಿಂಗ್ ಹ್ಯಾಮ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ತಂಡ 288 ರನ್ ಪೇರಿಸಿತ್ತು. 289 ರನ್ ಗಳ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 273 ರನ್ ಮಾತ್ರ ಗಳಿಸಲು ಶಕ್ತವಾಯಿತು. ಇದರೊಂದಿಗೆ 15 ರನ್ ಗಳಿಗೆ ಸೋಲಿಗೆ ಶರಣಾಯಿತು.
ಆಸ್ಟ್ರೇಲಿಯಾ ಪರ ಸ್ಮಿತ್ 73, ಕರ್ರಿ 45 ಮತ್ತು ಕೌಲ್ಟರ್ ನೈಲ್ 92 ರನ್ ಪೇರಿಸಿದ್ದಾರೆ. ವೆಸ್ಟ್ ಇಂಡೀಸ್ ಪರ ಬೌಲಿಂಗ್ ನಲ್ಲಿ ಬ್ರಾರ್ಥ್ವೈಟ್ 3, ಥಾಮಸ್, ಕಾಟ್ರಲ್ ಮತ್ತು ರಸೂಲ್ ತಲಾ 2 ವಿಕೆಟ್ ಪಡೆದಿದ್ದಾರೆ.
ವೆಸ್ಟ್ ಇಂಡೀಸ್ ಪರ ಕ್ರಿಸ್ ಗೇಯ್ಲ್ 21, ಹೋಪ್ 68, ಪೂರನ್ 40 ಮತ್ತು ಹೋಲ್ಡರ್ 51 ರನ್ ಪೇರಿಸಿದ್ದಾರೆ. ಆಸ್ಟ್ರೇಲಿಯಾ ಪರ ಬೌಲಿಂಗ್ ನಲ್ಲಿ ಮಿಚೆಲ್ ಸ್ಟಾರ್ಕ್ 5, ಕಮ್ಮಿಸ್ 2 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


