ಕ್ರಿಕೆಟ್

ವಿಶ್ವಕಪ್ 2019: ಬಾಂಗ್ಲಾ ವಿರುದ್ಧ ನ್ಯೂಝಿಲ್ಯಾಂಡ್ ಗೆ 2 ವಿಕೆಟ್ ಗೆಲುವು

ಐಸಿಸಿ ವಿಶ್ವಕಪ್ ಪ್ರಸಕ್ತ ಆವೃತ್ತಿಯ ಬುಧವಾರ ನಡೆದ ಎರಡನೇ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ನ್ಯೂಝಿಲ್ಯಾಂಡ್ ಎರಡು ವಿಕೆಟ್ ಗಳ ಪ್ರಯಾಸದ ಗೆಲುವು ದಾಖಲಿಸಿ

ವಿಶ್ವಕಪ್ 2019: ಬಾಂಗ್ಲಾ ವಿರುದ್ಧ ನ್ಯೂಝಿಲ್ಯಾಂಡ್ ಗೆ 2 ವಿಕೆಟ್ ಗೆಲುವು
ವಿಶ್ವಕಪ್ 2019: ಬಾಂಗ್ಲಾ ವಿರುದ್ಧ ನ್ಯೂಝಿಲ್ಯಾಂಡ್ ಗೆ 2 ವಿಕೆಟ್ ಗೆಲುವು
Published On :
ಓವೆಲ್: ಐಸಿಸಿ ವಿಶ್ವಕಪ್ ಪ್ರಸಕ್ತ ಆವೃತ್ತಿಯ ಬುಧವಾರ ನಡೆದ ಎರಡನೇ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ನ್ಯೂಝಿಲ್ಯಾಂಡ್ ಎರಡು ವಿಕೆಟ್ ಗಳ ಪ್ರಯಾಸದ ಗೆಲುವು ದಾಖಲಿಸಿದೆ.
ಮೊದಲು ಬ್ಯಾಟ್ ಮಾಡಿದ್ದ ನ್ಯೂಝಿಲ್ಯಾಂಡ್ ಪರ ರಾಸ್ ಟೇಲರ್ 82 ರನ್ ಗಳಿಸಿ ಮಹತ್ವದ ಕೊಡುಗೆ ನೀಡಿದ್ದರೂ ಸಹ ಬಾಂಗ್ಲಾ ಬೌಲರ್ ಮೆಹದಿ ಹಸನ್ ಮಿರ್ಝಾ ಅವರ ಮೋಡಿಗೆ ಸಿಕ್ಕು 47.1 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿತ್ತು.
ಇತ್ತ ಗುರಿ ಬೆನ್ನತ್ತಿದ ಬಾಂಗ್ಲಾ ಪಡೆ ಶಹೀದ್ ಅಲ್ ಹಸನ್ ಅವರ 64 ರನ್ ಗಳ ನೆರವಿನೊಡನೆ ದಿಟ್ಟ ಉತ್ತರ ನೀಡಲು ಮುಂದಾಯಿತಾದರೂ ಕಡೇ ಕ್ಷಣದಲ್ಲಿ ಗೆಲುವು ಸಾಧಿಸುವಲ್ಲಿ ವಿಫಲವಾಗಿ 49.2 ಓವರ್ ಗಳಲ್ಲಿ 244 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ನ್ಯೂಝಿಲ್ಯಾಂಡ್ ರೋಚಕ ಜಯವನ್ನು ತನ್ನದಾಗಿಸಿಕೊಂಡಿತು.
91 ಎಸೆತಕ್ಕೆ 82 ರನ್ ಗಳಿಸಿದ ರಾಸ್ ಟೇಲರ್ ಪಂದ್ಯ ಪುರುಷೋತ್ತಮರೆನಿಸಿಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.