ವಿಂಡೀಸ್ ವಿರುದ್ಧದ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್ ವಿಶ್ವದಾಖಲೆ!
ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ತಮ್ಮ ಮಾರಕ ಬೌಲಿಂಗ್ ಮೂಲಕ ವಿಶ್ವದಾಖಲೆ ನಿರ್ಮಾಣ ಮಾಡಿದ್ದಾರೆ.

Published On :
ನಾಟಿಂಗ್ ಹ್ಯಾಮ್: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ತಮ್ಮ ಮಾರಕ ಬೌಲಿಂಗ್ ಮೂಲಕ ವಿಶ್ವದಾಖಲೆ ನಿರ್ಮಾಣ ಮಾಡಿದ್ದಾರೆ.
ನಿನ್ನೆ ವೆಸ್ಟ್ ಇಂಡೀಸ್ ವಿರುದ್ಧ 15 ರನ್‌ಗಳಿಂದ ಜಯ ಸಾಧಿಸುವಲ್ಲಿ ಆಸ್ಟ್ರೇಲಿಯಾಗೆ ನೆರವಾಗಿದ್ದ ವೇಗಿ ಮಿಚೆಲ್ ಸ್ಟಾರ್ಕ್, ಇದೇ ಪಂದ್ಯದಲ್ಲಿ ನೂತನ ಮೈಲಿಗಲ್ಲು ಸೃಷ್ಟಿಸಿದರು. ಏಕದಿನ ಮಾದರಿಯಲ್ಲಿ ಅತಿ ವೇಗವಾಗಿ 150 ವಿಕೆಟ್‌ಗಳು ಪಡೆದ ವಿಶ್ವದ ಮೊದಲನೇ ಬೌಲರ್ ಎಂಬ ಖ್ಯಾತಿಗೆ ಗುರುವಾರ ಸ್ಟಾರ್ಕ್ ಭಾಜನರಾದರು. ಈ ದಾಖಲೆ ಮಾಡಲು ಅವರು 77 ಪಂದ್ಯಗಳನ್ನು ತೆಗೆದುಕೊಂಡಿದ್ದಾರೆ.
ಈ ಹಿಂದೆ ಈ ದಾಖಲೆ ಪಾಕಿಸ್ತಾನದ ಮಾಜಿ ಬೌಲರ್ ಸಕ್ಲೈನ್ ಮುಷ್ತಾಕ್ ಅವರ ಹೆಸರಿಲ್ಲಿತ್ತು. ಮುಷ್ತಾಕ್ 78 ಪಂದ್ಯಗಳಿಂದ ಈ ದಾಖಲೆ ಮಾಡಿದ್ದರು. ಇದೀಗ ಅವರ ದಾಖಲೆಯನ್ನುಮಿಚೆಲ್ ಸ್ಟಾರ್ಕ್ ಮುರಿದಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಐಸಿಸಿ ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ 15 ರನ್ ಗಳಿಂದ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಮಿಚೆಲ್ 10 ಓವರ್‌ಗೆ 46 ರನ್ ನೀಡಿ 5 ವಿಕೆಟ್ ಪಡೆದರು.
ಇನ್ನು ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 15 ರನ್ ಗಳ ರೋಚಕ ಗೆಲುವು ಸಾಧಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕ್ರಿಕೆಟ್ಆಸ್ಟ್ರೇಲಿಯಾAustraliaRecordದಾಖಲೆMitchell Starcಮಿಚೆಲ್ ಸ್ಟಾರ್ಕ್ICC World Cup 2019Nottinghamನಾಟಿಂಗ್ ಹ್ಯಾಮ್Cricketoffbeatಐಸಿಸಿ ವಿಶ್ವ ಕಪ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


