'ಬಲಿದಾನ ಮುದ್ರೆ' ಗ್ಲೌಸ್ ಹಾಕಿಕೊಳ್ಳುವಂತೆ ಸಹ ಆಟಗಾರರಿಂದ ಧೋನಿಗೆ ಒತ್ತಾಯ! ಇಂದು ಏನಾಗಲಿದೆ?
ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 'ಕಠಾರಿ ಮುದ್ರೆ' ಹೊಂದಿರುವ ಗ್ಲೌಸ್ ಮೂಲಕವೇ ವಿಕೆಟ್ ಕೀಪಿಂಗ್ ಮುಂದುವರಿಸುವಂತೆ ಟೀಂ ಇಂಡಿಯಾ ಸಹ ಆಟಗಾರರು ಮಹೇಂದ್ರ ಸಿಂಗ್ ಧೋನಿಗೆ ಒತ್ತಾಯಿಸಿದ್ದಾರೆ.

Published On :
ಲಂಡನ್: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 'ಕಠಾರಿ ಮುದ್ರೆ' ಹೊಂದಿರುವ ಗ್ಲೌಸ್ ಮೂಲಕವೇ ವಿಕೆಟ್ ಕೀಪಿಂಗ್ ಮುಂದುವರಿಸುವಂತೆ ಟೀಂ ಇಂಡಿಯಾ ಸಹ ಆಟಗಾರರು ಮಹೇಂದ್ರ ಸಿಂಗ್ ಧೋನಿಗೆ ಒತ್ತಾಯಿಸಿದ್ದಾರೆಂದು ತಿಳಿದುಬಂದಿದೆ.
ಬಲಿದಾನದ ಮುದ್ರೆ ಹೊಂದಿರುವ ಗ್ಲೌಸ್‌ಗಳನ್ನು ಬಳಸುವುದು ಅಥವಾ ಬಿಡುವುದು ಅಂತಿಮವಾಗಿ ಧೋನಿ ಅವರಿಗೆ ಬಿಟ್ಟಿದ್ದು, ಆದರೆ ಎಂಎಸ್ ಧೋನಿ ಈ ವಿಷಯದಲ್ಲಿ ಯಾವುದೇ ನಿರ್ಧಾರ ತೆಗೆದುಕೊಂಡರು ಸಹ ಆಟಗಾರರು ಬೆಂಬಲಿಸಲಿದ್ದಾರೆ ಎಂದು ಭಾರತ ತಂಡದ ಮೂಲಗಳಿಂದ ತಿಳಿದುಬಂದಿದೆ.
ಭಾರತೀಯ ಯೋಧರ ಬಲಿದಾನಕ್ಕೆ ಪ್ರತೀಕವಾಗಿ ಟೀಂ ಇಂಡಿಯಾದ ಹಿರಿಯ ಆಟಗಾರ ಎಂಎಸ್ ಧೋನಿ ಕೀಪಿಂಗ್ ಗ್ಲೌಸ್ ಮೇಲೆ ಭಾರತೀಯ ಸೇನೆಯ ಚಿಹ್ನೆ ಬಳಿಸಿ ವಿಶೇಷ ಗೌರವ ಸಲ್ಲಿಕೆ ಮಾಡಿದ್ದು ಇದಕ್ಕೆ ತೀವ್ರ ಮಚ್ಚುಗೆ ವ್ಯಕ್ತವಾಗಿತ್ತು. ಆದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಐಸಿಸಿ ಬ್ಯಾಡ್ಜ್ ತೆಗೆಯುವಂತೆ ಧೋನಿಗೆ ಹಾಗೂ ಬಿಸಿಸಿಐಗೆ ಸೂಚಿಸಿತ್ತು.
ಕಳೆದ ಬುಧವಾರ ಸೌಥ್ಯಾಂಪ್ಟನ್ ನ ರೋಸ್ ಬಾಲ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ವಿಕೆಟ್ ಕೀಪಿಂಗ್ ಮಾಡುತ್ತಿದ್ದ ಎಂಎಸ್ ಧೋನಿ ವಿಶೇಷ ಗ್ಲೌಸ್ ಧರಿಸಿದ್ದರು. ಈ ಗ್ಲೌಸ್ ಮೇಲೆ ಭಾರತೀಯ ಸೇನೆಯ ಬಲಿದಾನದ ಲೋಗೋ ಅಚ್ಚು ಹಾಕಲಾಗಿತ್ತು. ಪಂದ್ಯದ ಆರಂಭದಿಂದಲೂ ಇದು ಯಾರ ಕಣ್ಣಿಗೂ ಬಿದ್ದಿರಲಿಲ್ಲ.
ಆದರೆ ಧೋನಿ ದಕ್ಷಿಣ ಆಫ್ರಿಕಾದ ಬ್ಯಾಟ್ಸ್ ಮನ್ ಪೆಹ್ಲುಕ್ವಾಯೋ ಅವರನ್ನು ಸ್ಟಂಪೌಟ್ ಮಾಡಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಟಿವಿ ರೀಪ್ಲೆ ವೇಳೆ ಧೋನಿ ಸ್ಟಂಪೌಂಟ್ ಅನ್ನು ಜೂಮ್ ಮಾಡಿ ತೋರಿಸುವಾಗ ಧೋನಿ ಗ್ಲೌಸ್ ಮೇಲಿದ್ದ ಸೈನಿಕರ ಬಲಿದಾನದ ಲೋಗೋ ಕೂಡ ಕಂಡಿದೆ. ಕೂಡಲೇ ಧೋನಿ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ ಕೂಡ ವ್ಯಕ್ತವಾಗಿದೆ.
ಇನ್ನು ತಮ್ಮ ಅದ್ಬುತ ಕ್ರಿಕೆಟ್ ಪ್ರದರ್ಶನದಿಂದಲೇ ಧೋನಿ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಗೌರವಕ್ಕೆ ಪಾತ್ರರಾಗಿದ್ದರು. ಅಲ್ಲದೆ ಧೋನಿ ಅಗ್ರಾದಲ್ಲಿ ಕೆಲ ದಿನಗಳ ಕಾಲ ಸೇನಾ ತರಬೇತಿಯಲ್ಲಿ ಕೂಡ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಆಸ್ಟ್ರೇಲಿಯಾಟೀಂ ಇಂಡಿಯಾAustraliaTeam IndiaMS Dhoniಎಂಎಸ್ ಧೋನಿWorld Cup 2019ವಿಶ್ವಕಪ್ 2019Army insignia Gloveಬಲಿದಾನ ಮುದ್ರೆ ಗ್ಲೌಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


