ಇಲ್ಲಿ ಬರಬೇಡಾ ಹೋಗು ಮಳೆ ಮಹಾರಾಷ್ಟ್ರಕ್ಕೆ; ಕೇದಾರ್ ಜಾಧವ್ ವಿಡಿಯೋ ವೈರಲ್!
ವಿಶ್ವಕಪ್ ಟೂರ್ನಿಯ ನ್ಯೂಜಿಲ್ಯಾಂಡ್ ಮತ್ತು ಟೀಂ ಇಂಡಿಯಾ ವಿರುದ್ಧದ ಪಂದ್ಯ ಮಳೆಯಿಂದ ರದ್ದಾಗಿರುವುದಕ್ಕೆ ಕ್ರಿಕೆಟ್ ಅಭಿಮಾನಿಗಳು ತೀವ್ರ ಬೇಸರ ಮಾಡಿಕೊಂಡಿದ್ದರು.

Published On :
ಲಂಡನ್: ವಿಶ್ವಕಪ್ ಟೂರ್ನಿಯ ನ್ಯೂಜಿಲ್ಯಾಂಡ್ ಮತ್ತು ಟೀಂ ಇಂಡಿಯಾ ವಿರುದ್ಧದ ಪಂದ್ಯ ಮಳೆಯಿಂದ ರದ್ದಾಗಿರುವುದಕ್ಕೆ ಕ್ರಿಕೆಟ್ ಅಭಿಮಾನಿಗಳು ತೀವ್ರ ಬೇಸರ ಮಾಡಿಕೊಂಡಿದ್ದರು. ಇದೀಗ ನಾಳೆ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಪಂದ್ಯ ನಡೆಯಲಿದ್ದು ಈ ಪಂದ್ಯಕ್ಕೂ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ.
ಇನ್ನು ಟೀಂ ಇಂಡಿಯಾದ ಆಟಗಾರ ಕೇದಾರ್ ಜಾಧವ್ ಇಂಗ್ಲೆಂಡ್ ನೆಲದಲ್ಲಿ ನಿಂತು ಮೋಡಗಳತ್ತ ಕೈ ತೋರಿಸಿ ಹೋಗು ಹೋಗು ಮಳೆ ಮಹಾರಾಷ್ಟ್ರಕ್ಕೆ ಎಂದು ಹೇಳಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮೂರು ಪಂದ್ಯಗಳನ್ನು ಆಡಿದ್ದು ಎರಡರಲ್ಲಿ ಜಯಗಳಿಸಿದೆ. ಇನ್ನು ಮೂರನೇ ಪಂದ್ಯ ಮಳೆಯಿಂದ ರದ್ದಾಗಿದ್ದು ನಾಳೆ ಪಾಕಿಸ್ತಾನ ವಿರುದ್ಧದ ಪಂದ್ಯ ಹೆಚ್ಚು ಮಹತ್ವದ್ದಾಗಿದೆ.
Haha Kedar Jadhav asking rains from England to shift to Maharashtra
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam Indiaಮಹಾರಾಷ್ಟ್ರMaharashtraಮಳೆಇಂಗ್ಲೆಂಡ್EnglandrainKedar JadhavCricket Offbeatಕ್ರಿಕೆಟ್ ಸ್ವಾರಸ್ಯಕೇದಾರ್ ಜಾಧವ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


