ವಿಶ್ವಕಪ್ 2019: ಸಿಂಹಿಳೀಯರನ್ನು ಮಣಿಸಿದ ಅಸೀಸ್ ಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ
ದಿ ಓವಲ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಸಿ ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ 87 ರನ್ ಗಳ ಭರ್ಜರಿ ಜಯ ಸಾಧಿಸಿದೆ.

Published On :
ಲಂಡನ್: ದಿ ಓವಲ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಸಿ ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ 87 ರನ್ ಗಳ ಭರ್ಜರಿ ಜಯ ಸಾಧಿಸಿದೆ.
ಈ ಗೆಲುವಿನೊಡನೆ ಸರಣಿಯಲ್ಲಿ ಆಡಿರುವ ಐದು ಪಂದ್ಯಗಳ ಪೈಕಿ ನಾಲ್ಕರಲ್ಲಿ ಗೆದ್ದಿರುವ ಅಸೀಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಅಸೀಸ್ ನೀಡಿದ್ದ 335 ಬೃಹತ್ ಗುರಿ ಬೆನ್ನತ್ತಿದ ಲಂಕಾ ಪಡೆ ನಾಯಕ ದಿಮುತ್ ಕರುಣಾರತ್ನೆ (97) ಹಾಗೂ ಕುಸಾಲ್ ಪರೇರಾ (52) ಶತ ಪ್ರಯತ್ನದ ಹೊರತಾಗಿಯೂ 45.5 ಓವರ್ ಗಳಲ್ಲಿ 247 ರನ್ ಗಳಿಸುವಷ್ಟರಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು ಸೋಲೊಪ್ಪಿತು.
ಲಂಕಾ ಪರ ಕುಸಾಲ್ ಪರೇರ್33 ಎಸೆತಗಳಲ್ಲೇ ಅರ್ಧಶತಕ ಸಿಡಿಸುವ ಮೂಲಕ ಪ್ರಸಕ್ತ ವಿಶ್ವಕಪ್ ನಲ್ಲಿ ಅತಿ ವೇಗದ ಅರ್ಧಶತಕ ಗಳಿಸಿದ ಇನ್ನೊಬ್ಬ ಆಟಗಾರನೆನಿಸಿಕೊಂಡರು. ನಾಯಕ ದಿಮುತ್ 43 ಎಸೆತಗಳಲ್ಲಿ ಅರ್ಧಶತಕ 108 ಎಸೆತಗಳ್ಲಿ ಒಂಬತ್ತು ಬೌಂಡರಿಸೇರಿ 97 ರನ್ ಗಳಿಸಿದ್ದರು.
ಆದರೆ ಲಂಕಾ ಇತರೆ ಆಟಗಾರರಾರೂ ಈ ಇಬ್ಬರಿಗೆ ಹೆಚ್ಚು ಸಾಥ್ ನೀಡಲಿಲ್ಲ. ಹಾಗಾಗಿ ಲಂಕಾ ಸೋಲು ಖಚಿತವಾಯುತು.
ಆಸ್ಟ್ರೇಲಿಯಾ ಪರವಾಗಿ ಮಿಚೆಲ್ ಸ್ಟಾರ್ಕ್ ನಾಲ್ಕು ಹಾಗೂ ಕೇನ್ ರಿಚರ್ಡ್ಸಸನ್ ಮೂರು ವಿಕೆಟ್ ಕಬಳಿಸಿದರು.
ಈ ಸೋಲಿನೊಡನೆ ಲಂಕಾ ಸರಣಿಯಲ್ಲಿ ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕು ಅಂಕಗಳನ್ನಷ್ಟೇ ಪಡೆದು ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಮುಂದುವರಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಆಸ್ಟ್ರೇಲಿಯಾAustraliaSri Lankaಶ್ರೀಲಂಕಾMitchell StarcAaron Finchಮಿಚೆಲ್ ಸ್ಟಾರ್ಕ್World Cup 2019ಆರೋನ್ ಫಿಂಚ್ವಿಶ್ವಕಪ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


