ಸಚಿನ್ ತೆಂಡೂಲ್ಕರ್‌ರ ಮತ್ತೊಂದು ವಿಶ್ವ ದಾಖಲೆ ಧೂಳಿಪಟ ಮಾಡಿದ 'ರನ್ ಮೆಷಿನ್' ಕೊಹ್ಲಿ!
ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾಸ್ಚರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಸಮ್ಮುಖದಲ್ಲೇ ಮತ್ತೊಂದು ವಿಶ್ವ ದಾಖಲೆಯನ್ನು ಧೂಳಿಪಟ ಮಾಡಿದ್ದಾರೆ.

Published On :
ಲಂಡನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾಸ್ಚರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಸಮ್ಮುಖದಲ್ಲೇ ಮತ್ತೊಂದು ವಿಶ್ವ ದಾಖಲೆಯನ್ನು ಧೂಳಿಪಟ ಮಾಡಿದ್ದಾರೆ.
ಭಾರತ ಹಾಗೂ ಪಾಕಿಸ್ತಾನ ತಂಡಗಳು ಐಸಿಸಿ ವಿಶ್ವಕಪ್ ಟೂರ್ನಿಯ 22ನೇ ಪಂದ್ಯದಲ್ಲಿ ಇಲ್ಲಿನ ಮ್ಯಾಂಚೆಸ್ಟರ್ ನಲ್ಲಿ ಮುಖಾಮುಖಿಯಾಗುತ್ತಿವೆ. ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಪಾಕಿ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 57 ರನ್ ಗಳಿಸಿದರೆ ಸಚಿನ್ ತೆಂಡೂಲ್ಕರ್ ಅವರ ಅಪರೂಪದ ದಾಖಲೆಯೊಂದನ್ನು ಹಿಂದಿಕ್ಕಿದ್ದು ಈ 57 ರನ್ ಗಳ ಮುಖಾಂತರ ಕೊಹ್ಲಿ ಏಕದಿನ ವೃತ್ತಿ ಜೀವನದಲ್ಲಿ 11,000 ರನ್ ಪೂರೈಸಿದ್ದಾರೆ.
ಕಳೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 3ನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಂದಿದ್ದ ಕೊಹ್ಲಿ 77 ಎಸೆತಗಳಿಗೆ 82 ರನ್ ಬಾರಿಸಿದ್ದರು. ಇದೀಗ ಇವತ್ತಿನ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕೇವಲ 57 ರನ್ ಬಾರಿಸಿದರೆ ಏಕದಿನ ಕ್ರಿಕೆಟ್‌ನಲ್ಲಿ ವೇಗದ 11,000 ರನ್ ಪೂರೈಸಿದ ದಾಖಲೆಗೆ ವಿರಾಟ್ ಕೊಹ್ಲಿ ಭಾಜನರಾದರು.
ಕೊಹ್ಲಿ ಪಾಕಿಸ್ತಾನ ವಿರುದ್ದದ ಪಂದ್ಯ 222ನೇ ಇನ್ನಿಂಗ್ಸ್ ಆಗಿರಲಿದೆ. ಆ ಮೂಲಕ ಕೊಹ್ಲಿ 11 ಸಾವಿರ ರನ್ ಪೂರೈಸಿದ ಭಾರತ ಮೂರನೇ ಆಟಗಾರ ಎಂಬ ಕ್ರೀರ್ತಿಗೆ ಭಾಜನರಾಗಿದ್ದಾರೆ. ಈ ಸಾಧನೆಗಾಗಿ ಸಚಿನ್ ತೆಂಡೂಲ್ಕರ್ 276 ಇನ್ನಿಂಗ್ಸ್ ತೆಗೆದುಕೊಂಡಿದ್ದರು. ಇದಕ್ಕೂ ಮೊದಲು ಸಚಿನ್ ತೆಂಡೂಲ್ಕರ್ (18,426 ರನ್ ಗಳು) ಮತ್ತು ಸೌರವ್ ಗಂಗೂಲಿ (11,363 ರನ್ ) ಈ ಕೀರ್ತಿಗೆ ಭಾಜನರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sachin Tendulkarಸಚಿನ್ ತೆಂಡೂಲ್ಕರ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿOffbeatWorld Cup 2019ವಿಶ್ವಕಪ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


