''ಪಾಕಿಸ್ತಾನದ ಮೇಲೆ ಮತ್ತೊಂದು ಸ್ಟ್ರೈಕ್ '' ಟೀಂ ಇಂಡಿಯಾ ಗುಣಗಾನ ಮಾಡಿದ ಅಮಿಶ್ ಶಾ
ಇಂಗ್ಲೆಂಡಿನ ಮ್ಯಾಂಚೆಸ್ಟರಿನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಭಾರತ 89 ರನ್ ಗಳ ಅಂತರದಿಂದ ಗೆಲ್ಲುವ ಮೂಲಕ ಪಾಕಿಸ್ತಾನದ ಮೇಲೆ ಮತ್ತೊಂದು ಸ್ಟ್ರೈಕ್ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Published On :
ನವದೆಹಲಿ: ಇಂಗ್ಲೆಂಡಿನ ಮ್ಯಾಂಚೆಸ್ಟರಿನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಭಾರತ 89 ರನ್ ಗಳ ಅಂತರದಿಂದ ಗೆಲ್ಲುವ ಮೂಲಕ ಪಾಕಿಸ್ತಾನದ ಮೇಲೆ ಮತ್ತೊಂದು ಸ್ಟ್ರೈಕ್ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್, ಜಮ್ಮು- ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮೊದಲಾದ ನಾಯಕರು ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾವನ್ನು ಅಭಿನಂದಿಸಿದ್ದಾರೆ.
ಭಾರತೀಯ ತಂಡದಿಂದ ಪಾಕಿಸ್ತಾನ ಮೇಲೆ ಮತ್ತೊಂದು ಸ್ಟ್ರೈಕ್ ಆಗಿದೆ. ಫಲಿತಾಂಶ ಒಂದೇ ಆಗಿದೆ. ಅದ್ಬುತಪ್ರದರ್ಶನ ತೋರಿದ ಎಲ್ಲಾ ಆಟಗಾರರನ್ನು ಅಭಿನಂದಿಸುವುದಾಗಿ ಹೇಳಿರುವ ಅಮಿತ್ ಶಾ , ಪ್ರತಿಯೊಬ್ಬ ಭಾರತೀಯರಿಗೂ ಹೆಮ್ಮೆ ಪಡುತ್ತಿದ್ದು, ಗೆಲುವನ್ನು ಆಚರಿಸುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.
ಅತ್ಯಾದ್ಬುತ ಪಂದ್ಯವಾಗಿತ್ತು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಅದೇ ರೀತಿಯ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪಿಯೂಷ್ ಗೋಯೆಲ್ , ಕಿರಣ್ ರಿಜಿಜು,ಜಮ್ಮು- ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಮತ್ತಿತರ ಅನೇಕ ನಾಯಕರು ಟೀಂ ಇಂಡಿಯಾವನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


