ವಿಶ್ವಕಪ್ ಕ್ರಿಕೆಟ್: ಪಾಕ್ ವಿರುದ್ಧ ಟೀಂ ಇಂಡಿಯಾಗೆ 7ನೇ ಐತಿಹಾಸಿಕ ಗೆಲುವು
ಬದ್ದ ವೈರಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯ ಭರ್ಜರಿ ಜಯ ದಾಖಲಿಸಿದೆ. ಇದರೊಡನೆ ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲಿ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದಂತಾಗಿದೆ.

Published On :
ಮ್ಯಾಂಚ್ದೆಸ್ಟರ್: ಬದ್ದ ವೈರಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯ ಭರ್ಜರಿ ಜಯ ದಾಖಲಿಸಿದೆ. ಇದರೊಡನೆ ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲಿ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದಂತಾಗಿದೆ.
ಟೀಂ ಇಂಡಿಯಾ ಒಡ್ಡಿದ್ದ 337 ರನ್ ಟಾರ್ಗೆಟ್ ಬೆನ್ನತ್ತಿದ್ದ ಪಾಕಿಸ್ತಾನ ಆಟಕ್ಕೆ ಮಳೆಯೂ ಅಡ್ಡಿಯಾಗಿತ್ತು. ಪಂದ್ಯದ 35 ಓವರ್ ವೇಳೆಗೆ ಪಾಕ್ 6 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿದ್ದಾಗ ಮಳೆ ಪ್ರಾರಂಭವಾಗಿದ್ದು ಪಂದ್ಯ ಕೆಲ ಕಾಲ ಸ್ಥಗಿತವಾಗಿತ್ತು.
ಮಳೆ ನಿಂತು ಮತ್ತೆ ಪಂದ್ಯ ಪ್ರಾರಂಭವಾದಾಗ ಡಕ್ವರ್ತ್ ನಿಯಮದ ಅನ್ವಯ ಪಾಕ್ಗೆ ಗೆಲ್ಲಲು 30 ಎಸೆತಗಳಲ್ಲಿ 136 ರನ್ಗಳ ಟಾರ್ಗೆಟ್ ನಿಡಲಾಗಿತ್ತು.
ಆದರೆ ಪಾಕಿಸ್ತಾನದ ಆಟಗಾರರಿಗೆ ಈ ಮೊತ್ತ ಕಲೆಹಾಕಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಅಂತಿಮವಾಗಿ ವಾಸಮ್ 46 ಶದಾಬ್ ಖಾನ್ 20 ರನ್ ಗಳಿಸಿ ಅಜೇಯರಾಗಿ ಉಳಿದೂ 212 ರನ್ ಗಳಿಸಲಷ್ಟೇ ಸಾಧ್ಯವಾಗಿತ್ತು.
ಈ ಮೂಲಕ ಭಾರತಕ್ಕೆ 89 ರನ್ ಗಳ ರೋಚಕ ಗೆಲುವು ದಕ್ಕಿದೆ.
ಪ್ರಸಕ್ತ ವಿಶ್ವಕಪ್ ನಲ್ಲಿ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವು ದಾಖಲಿಸಿರುವ ಟೀಂ ಇಂಡಿಯಾ 7 ಅಂಕ ಪಡೆದು ಅಂಕಪಟ್ಟಿಯಲ್ಲಿ ತೃತೀಯ ಸ್ಥಾನಕ್ಕೇರಿದೆ.
ಇನ್ನು ಪಾಕ್ ಇದುವರೆಗೆ ಆಡಿದ ಐದು ಪಂದ್ಯದಲ್ಲಿ ಮೂರು ಸೋಲು ಕಂಡು 3 ಅಂಕಗಳೊಡನೆ ಒಂಬತ್ತನೇ ಸ್ಥಾನದಲ್ಲೇ ಸ್ಥಿರವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


