ವಿಶ್ವಕಪ್ : ಪ್ರಧಾನಿ ಇಮ್ರಾನ್ ಖಾನ್ ಸಲಹೆ ನಿರ್ಲಕ್ಷಿಸಿದ ಪಾಕ್ ತಂಡ!
ಟಾಸ್ ಗೆದ್ದರೆ ಮೊದಲು ಬ್ಯಾಟಿಂಗನ್ನೆ ಆಯ್ದುಕೊಳ್ಳಿ ಎಂದು ಇಮ್ರಾನ್ ಖಾನ್ ಸಲಹೆ ಮಾಡಿದ್ದರು. ಆದರೆ. ಪಾಕಿಸ್ತಾನ ತಂಡದ ನಾಯಕ ಸರ್ಫರಾಜ್ ಈ ಸಲಹೆ ನಿರ್ಲಕ್ಷಿಸಿ ಬೌಲಿಂಗ್ ಆಯ್ದುಕೊಂಡರು.

Published On :
ಮ್ಯಾಂಚೆಸ್ಟರ್ : ನಿನ್ನೆ ನಡೆದ ಭಾರತ- ಪಾಕಿಸ್ತಾನ ನಡುವಣ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಹುರಿದುಂಬಿಸಲು ಅಲ್ಲಿನ ಪ್ರಧಾನಿ ಇಮ್ರಾನ್ ಖಾನ್ ಟ್ವೀಟರ್ ಮೂಲಕ ಸಲಹೆ ನೀಡುತ್ತಿದ್ದರು.
ಟಾಸ್ ಗೆದ್ದರೆ ಮೊದಲು ಬ್ಯಾಟಿಂಗನ್ನೆ ಆಯ್ದುಕೊಳ್ಳಿ ಎಂದು ಇಮ್ರಾನ್ ಖಾನ್ ಸಲಹೆ ಮಾಡಿದ್ದರು. ಆದರೆ. ಸರ್ಫರಾಜ್ ಈ ಸಲಹೆಗೆ ಬೆಲೆ ನೀಡಿಲ್ಲ.
1992ರಲ್ಲಿ ಇಮ್ರಾನ್ ಖಾನ್ ಪಾಕಿಸ್ತಾನ ತಂಡದ ನಾಯಕರಾಗಿದ್ದ ಸಂದರ್ಭದಲ್ಲಿ ಯಾರೊಬ್ಬರು ಅವರ ನಿರ್ಧಾರವನ್ನು ಪ್ರಶ್ನಿಸುತ್ತಿರಲಿಲ್ಲ. ಆದರೆ, ಒಲ್ಡ್ ಟ್ರಾಪೊರ್ಡ್ ನಲ್ಲಿ ನಡೆದ ಪಂದ್ಯದಲ್ಲಿ ಇಮ್ರಾನ್ ಖಾನ್ ಸಲಹೆಯನ್ನು ಪಾಕಿಸ್ತಾನ ತಂಡ ಏಕೆ ಸ್ವೀಕರಿಸಲಿಲ್ಲ ಎಂದು ಟ್ವೀಟಿಗರು ಅಪಹಾಸ್ಯ ಮಾಡುತ್ತಿದ್ದಾರೆ.
ಪಾಕಿಸ್ತಾನದ ಏಕೈಕ ವಿಶ್ವಕಪ್ ಗೆಲುವಿನ ರೂವಾರಿಯಾಗಿರುವ ಇಮ್ರಾನ್ ಖಾನ್ ಅವರನ್ನು ಜನರು ಈಗಲೂ ಪ್ರೀತಿಯಿಂದ ಕಪ್ತಾನ ಎಂದೇ ಕರೆಯುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


