ಕ್ರಿಕೆಟ್

ಐಸಿಸಿ ವಿಶ್ವಕಪ್ 2019: ಆಫ್ಘಾನಿಸ್ತಾನದ ವಿರುದ್ಧ ಟಾಸ್ ಗೆದ್ದ ಭಾರತ, ಬ್ಯಾಟಿಂಗ್ ಆಯ್ಕೆ

ಐಸಿಸಿ ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಆಫ್ಘಾನಿಸ್ತಾನ ವಿರುದ್ಧ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಐಸಿಸಿ ವಿಶ್ವಕಪ್ 2019: ಆಫ್ಘಾನಿಸ್ತಾನದ ವಿರುದ್ಧ ಟಾಸ್ ಗೆದ್ದ ಭಾರತ, ಬ್ಯಾಟಿಂಗ್ ಆಯ್ಕೆ
ಟಾಸ್ ಗೆದ್ದ ಕೊಹ್ಲಿ
Published On :
ಲಂಡನ್: ಐಸಿಸಿ ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಆಫ್ಘಾನಿಸ್ತಾನ ವಿರುದ್ಧ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಸೌಥ್ಯಾಂಪ್ಟನ್ ನ ರೋಸ್ ಬೌಲ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಇಂದಿನ ಪಂದ್ಯದಲ್ಲಿ ಭಾರತ ತಂಡ ಬಹುತೇಕ ಈ ಹಿಂದಿನ ಆಟಗಾರರನ್ನೇ ಉಳಿಸಿಕೊಂಡಿದೆ. ಆದರೆ ಗಾಯಾಳು ಭುವನೇಶ್ವರ್ ಕುಮಾರ್ ಬದಲಿಗೆ ಮಹಮದ್ ಶಮಿಗೆ ಸ್ಥಾನ ನೀಡಲಾಗಿದೆ. 
ಇನ್ನು ಆಫ್ಘಾನಿಸ್ತಾನ ತಂಡದಲ್ಲಿ 2 ಪ್ರಮುಖ ಬದಲಾವಣೆ ಮಾಡಲಾಗಿದ್ದು, ದಾವ್ಲತ್ ಜಡ್ರಾನ್ ಮತ್ತು ನೂರ್ ಅಲಿ ಜಡರನ್ ಅವರ ಬದಲಿಗೆ ಹಜರತುಲ್ಲಾ ಮತ್ತು ಅಫ್ತಾಬ್ ಕಣಕ್ಳಿಳಿದಿದ್ದಾರೆ. ಹಾಲಿ ಟೂರ್ನಿಯಲ್ಲಿ ಒಟ್ಟು 4 ಪಂದ್ಯಗಳನ್ನಾಡಿರುವ ಭಾರತ ತಂಡ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ನ್ಯೂಜಿಲೆಂಡ್ ವಿರುದ್ಧದ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಐದು ಪಂದ್ಯಗಳನ್ನಾಡಿರುವ ಆಫ್ಘಾನಿಸ್ತಾನ ತಾನಾಡಿರುವ ಐದೂ ಪಂದ್ಯಗಳನ್ನು ಸೋತಿದ್ದು, ಅಂಕ ಪಟ್ಟಿಯಲ್ಲಿ ಇನ್ನು ಖಾತೆಯನ್ನೇ ತೆರೆದಿಲ್ಲ. ಆದರೆ ಅಂಕ ಪಟ್ಟಿಯಲ್ಲಿ 7 ಅಂಕಗಳನ್ನು ಹೊಂದಿರುವ ಭಾರತ 4ನೇ ಸ್ಥಾನದಲ್ಲಿದೆ. 
ತಂಡಗಳು ಇಂತಿವೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.