ವಿಶ್ವಕಪ್ ನಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕ್ ಇದೇ ಮೊದಲ ಬಾರಿ ಸೋತಿಲ್ಲ- ಸರ್ಫರಾಜ್
ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ಇದೇ ಮೊದಲ ಬಾರಿಗೆ ಸೋತಿಲ್ಲ ಎಂದು ಪಾಕ್ ತಂಡದ ನಾಯಕ ಸರ್ಫರಾಜ್ ಸಮರ್ಥಿಸಿಕೊಂಡಿದ್ದಾರೆ.

Published On :
ಮ್ಯಾಂಚೆಸ್ಟರ್ :ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ
ಇದೇ ಮೊದಲ ಬಾರಿ ಸೋತಿಲ್ಲ ಎಂದು ಪಾಕ್ ತಂಡದ ನಾಯಕ ಸರ್ಫರಾಜ್ ಸಮರ್ಥಿಸಿಕೊಂಡಿದ್ದಾರೆ.
ನಾಳೆ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಮತ್ತೆ ಕಮ್ ಬ್ಯಾಕ್ ಆಗುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾರತ ವಿರುದ್ಧ ಸೋಲಿನ ಕುರಿತಂತೆ ಪ್ರತಿಕ್ರಿಯಿಸಿರುವ ಸರ್ಫರಾಜ್, ಈ ಹಿಂದೆ ಹಲವು ಬಾರಿ ವಿಶ್ವಕಪ್ ನಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಸೋತಿದೆ. ಭಾರತ ವಿರುದ್ಧದ ಪಂದ್ಯದ ನಂತರ ಎಲ್ಲವೂ ಸರಿಯಾಗಲಿದೆ ಎಂದು ಹೇಳಿದ್ದಾರೆ. ಸಾಂಪ್ರದಾಯಿಕ ಎದುರಾಳಿ ಭಾರತ ವಿರುದ್ಧ ವಿಶ್ವಕಪ್ ನಲ್ಲಿ ಪಾಕಿಸ್ತಾನ ಏಳು ಬಾರಿ ಸೋಲನ್ನುಭವಿಸಿದೆ.
ವಿಶ್ವಕಪ್ ನಲ್ಲಿ ಭಾರತ ವಿರುದ್ಧ ಸೋತಾಗ ಪಾಕಿಸ್ತಾನದ ನಾಯಕನಾಗಿ ಮಾನಸಿಕವಾಗಿ ತುಂಬಾ ಒತ್ತಡಕ್ಕೊಳಗಾಗಬೇಕಾಗುತ್ತದೆ. ಜನರು ನಾವು ಸೋತಿದ್ದೇವೆ ಎಂದು ಅಪಹಾಸ್ಯ ಮಾಡುತ್ತಾರೆ. ಆದರೆ, ಇದೇನೂ ಮೊದಲ ಬಾರಿಗೆ ಸೋತಿಲ್ಲ. ಮತ್ತೆ ಕಮ್ ಬ್ಯಾಕ್ ಆಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಈಗಲೂ ಕೂಡಾ ನಮ್ಮಲ್ಲಿ ಆತ್ಮಸ್ಱೈರ್ಯ ಹೆಚ್ಚಿದೆ. ಪಂದ್ಯದಿಂದ ಪಂದ್ಯಕ್ಕೆ ವಿಶ್ವಾಸ ಹೆಚ್ಚಿಸಿಕೊಳ್ಳುವ ಅವಕಾಶವಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ನಾಳಿನ ಪಂದ್ಯದಲ್ಲಿ ಗೆಲುವು ಸಾಧಿಸುವ ಅತೀವ ವಿಶ್ವಾಸ ಇರುವುದಾಗಿ ಸರ್ಫರಾಜ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


