ಟೀಂ ಇಂಡಿಯಾ-ವೆಸ್ಟ್ ಇಂಡೀಸ್ ಸರಣಿಗೆ ಕೊಹ್ಲಿ-ಬುಮ್ರಾಗೆ ವಿಶ್ರಾಂತಿ ಸಾಧ್ಯತೆ!
ವಿಶ್ವಕಪ್ ಮುಕ್ತಾಯದ ಬಳಿಕ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾ ಟೆಸ್ಟ್, ಟಿ20 ಮತ್ತು ಏಕದಿನ ಸರಣಿಯನ್ನಾಡಲಿದೆ.

Published On :
ಮುಂಬೈ: ವಿಶ್ವಕಪ್ ಮುಕ್ತಾಯದ ಬಳಿಕ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾ ಟೆಸ್ಟ್, ಟಿ20 ಮತ್ತು ಏಕದಿನ ಸರಣಿಯನ್ನಾಡಲಿದೆ.
ಸದ್ಯ ವಿರಾಟ್ ಕೊಹ್ಲಿ ಮತ್ತು ಜಸ್ ಪ್ರೀತ್ ಬುಮ್ರಾ ವಿಶ್ವಕಪ್ ಟೂರ್ನಿಯಲ್ಲಿ ಆಡುತ್ತಿದ್ದಾರೆ. ಇನ್ನು ಸತತ ಕ್ರಿಕೆಟ್ ಸರಣಿಗಳಲ್ಲಿ ಆಡುತ್ತಿರುವ ಕೊಹ್ಲಿ ಮತ್ತು ಬುಮ್ರಾಗೆ ವಿಂಡೀಸ್ ಪ್ರವಾಸದಿಂದ ವಿಶ್ರಾಂತಿ ನೀಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮುಂದಾಗಿದೆ.
ಆಗಸ್ಟ್ 3ರಿಂದ ವಿಂಡೀಸ್ ಪ್ರವಾಸ ಆರಂಭಗೊಳ್ಳಲಿದ್ದು ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳ ಸರಣಿಗೆ ಇಬ್ಬರಿಗೂ ಬಿಸಿಸಿಐ ಬುಮ್ರಾ ಮತ್ತು ಕೊಹ್ಲಿಗೆ ವಿಶ್ರಾಂತಿ ನೀಡಲು ನಿರ್ಧರಿಸಿದೆ. ಇನ್ನು ಆಗಸ್ಟ್ 22ರಿಂದ ಟೆಸ್ಟ್ ಸರಣಿ ಆರಂಭಗೊಳ್ಳಲಿದ್ದು ಈ ವೇಳೆ ಕೊಹ್ಲಿ ಮತ್ತು ಬುಮ್ರಾ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ಹಿನ್ನೆಲೆಯಲ್ಲಿ ಸೀಮಿತ ಓವರ್ ಗಳಿಗೆ ರೋಹಿತ್ ಶರ್ಮಾ ನಾಯಕತ್ವ ವಹಿಸುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿವೆಸ್ಟ್ ಇಂಡೀಸ್ ಪ್ರವಾಸJasprit Bumrahಜಸ್ ಪ್ರೀತ್ ಬುಮ್ರಾWest Indies Series
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


