ದಿಢೀರ್ ಎದೆ ನೋವು: ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ ಮುಂಬೈನ ಆಸ್ಪತ್ರೆಗೆ ದಾಖಲು!
ಕ್ರಿಕೆಟ್ ದಿಗ್ಗಜ, ವಿಂಡೀಸ್ ಮಾಜಿ ಆಟಗಾರ ಬ್ರಿಯಾನ್ ಲಾರಾ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Published On :
ನವದೆಹಲಿ: ಕ್ರಿಕೆಟ್ ದಿಗ್ಗಜ, ವಿಂಡೀಸ್ ಮಾಜಿ ಆಟಗಾರ ಬ್ರಿಯಾನ್ ಲಾರಾ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಸ್ತುತ ವಿಶ್ವಕಪ್ ಟೂರ್ನಿಯ ಕಾಮೆಂಟೇಟರ್ ಆಗಿರುವ ಬ್ರಿಯಾನ್ ಲಾರಾ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಲಾರಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಅವರ ಆರೋಗ್ಯದ ಕುರಿತು ವೈದ್ಯರು ಯಾವುದೇ ಮಾಹಿತಿ ನೀಡಿಲ್ಲ.
ಬ್ರಿಯಾನ್ ಲಾರಾ ಅವರು 2007ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದರು. 131 ಟೆಸ್ಟ್ ಪಂದ್ಯಗಳನ್ನು ಆಡಿರುವ ಲಾರಾ 11953 ರನ್ ಹಾಗೂ 299 ಏಕದಿನ ಪಂದ್ಯಗಳಲ್ಲಿ 10405 ರನ್ ಬಾರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


