ನಾನು ಆರಾಮಾಗಿದ್ದೇನೆ, ಭಯಬೇಡ: ವಿಂಡೀಸ್ ದೈತ್ಯ ಬ್ರಿಯಾನ್ ಲಾರಾ
ನಾನು ಆರಾಮಾಗಿದ್ದೇನೆ, ಭಯಬೇಡ, ನಾಳೆ ಹೊಟೆಲ್ ಗೆ ಆಗಮಿಸುತ್ತೇನೆ ಎಂದು ವೆಸ್ಟ್ ಇಂಡೀಸ್ ಕ್ರಿಕೆಟ್ ಲೆಜೆಂಡ್ ಬ್ರಿಯಾನ್ ಲಾರಾ ಹೇಳಿದ್ದಾರೆ.

Published On :
ಮುಂಬೈ: ನಾನು ಆರಾಮಾಗಿದ್ದೇನೆ, ಭಯಬೇಡ, ನಾಳೆ ಹೊಟೆಲ್ ಗೆ ಆಗಮಿಸುತ್ತೇನೆ ಎಂದು ವೆಸ್ಟ್ ಇಂಡೀಸ್ ಕ್ರಿಕೆಟ್ ಲೆಜೆಂಡ್ ಬ್ರಿಯಾನ್ ಲಾರಾ ಹೇಳಿದ್ದಾರೆ.
ನಿನ್ನೆ ಲಾರಾ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗಿ ಲಾರಾ ಆರೋಗ್ಯದ ಕುರಿತು ಅಭಿಮಾನಿಗಳಲ್ಲಿ ತೀವ್ರ ಆತಂಕ ಮೂಡಿಸಿತ್ತು. ಆದರೆ ಇದೀಗ ಸ್ವತಃ ಲಾರಾ ಅವರೇ ಆಡಿಯೋ ಮೂಲಕ ತಮ್ಮ ಅಭಿಮಾನಿಗಳಿಗೆ ಆರೋಗ್ಯದ ಕುರಿತು ಮಾಹಿತಿ ನೀಡಿದ್ದಾರೆ.
ಲಾರಾ ಅವರು ಮಾತನಾಡಿರುವ ಆಡಿಯೋವನ್ನು ವೆಸ್ಟ್ ಇಂಡೀಸ್ ಕ್ರಿಕೆಟ್ ಬೋರ್ಡ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿದೆ. ಆಡಿಯೋದಲ್ಲಿ ಲಾರಾ, ಎದೆ ನೋವು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಆಸ್ಪತ್ರೆಗೆ ಬಂದು ಪರಿಶೀಲಿಸಿರುವುದಾಗಿ ಖಚಿತಪಡಿಸಿದ್ದಾರೆ. ಅಲ್ಲದೆ ತಾವು ಆರಾಮವಾಗಿದ್ದು, ನಾಳೆ (ಬುಧವಾರ) ಹೋಟೆಲ್ ರೂಮ್‌ಗೆ ಮರಳುವುದಾಗಿ ಖಚಿತಪಡಿಸಿದ್ದಾರೆ.
ಮೂಲಗಳ ಪ್ರಕಾರ ಹೃದಯಕ್ಕೆ ರಕ್ತವನ್ನು ರವಾನಿಸುವ ಕಿರಿದಾದ ರಕ್ತನಾಳಗಳಲ್ಲಿ ತಡೆಯುಂಟಾಗಿರುವ ಹಿನ್ನಲೆಯಲ್ಲಿ ಲಾರಾಗೆ ಎದೆ ನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. ಈ ಸಮಸ್ಯೆಗಾಗಿ ಎರಡು ವರ್ಷಗಳ ಹಿಂದೆಯೇ ಲಾರಾ ಚಿಕಿತ್ಸೆ ಪಡೆದುಕೊಂಡಿದ್ದರು. ಇದೀಗ ಮತ್ತೆ ನೋವು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಆಸ್ಪತ್ರೆಗೆ ತೆರಳಿ ವೈದಕೀಯ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.
UPDATE: Message from @BrianLara
"I am fine. I am recovering and I will be back in my hotel room tomorrow"
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್MumbaiಮುಂಬೈWest indieshospitalizedವೆಸ್ಟ್ ಇಂಡೀಸ್ಆಸ್ಪತ್ರೆಗೆ ದಾಖಲುBrian Laraಬ್ರಿಯಾನ್ ಲಾರಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


