ಕ್ರಿಕೆಟ್ ಲೆಜೆಂಡ್ ಲಾರಾ, ಸಚಿನ್ ದಾಖಲೆ ಮುರಿದು ಇತಿಹಾಸ ನಿರ್ಮಿಸಿದ 'ವಿರಾಟ್' ಕೊಹ್ಲಿ!
ಕ್ರಿಕೆಟ್ ಜಗತ್ತಿನ ಲೆಜೆಂಡ್ ಆಟಗಾರರಾದ ಸಚಿನ್ ತೆಂಡೂಲ್ಕರ್ ಮತ್ತು ಬ್ರಿಯಾನ್ ಲಾರಾ ಅವರ ಅಮೋಘ ದಾಖಲೆಯೊಂದನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮುರಿದಿದ್ದಾರೆ.

Published On :
ಲಂಡನ್: ಕ್ರಿಕೆಟ್ ಜಗತ್ತಿನ ಲೆಜೆಂಡ್ ಆಟಗಾರರಾದ ಸಚಿನ್ ತೆಂಡೂಲ್ಕರ್ ಮತ್ತು ಬ್ರಿಯಾನ್ ಲಾರಾ ಅವರ ಅಮೋಘ ದಾಖಲೆಯೊಂದನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮುರಿದಿದ್ದಾರೆ.
ಈ ಹಿಂದೆ ತಮ್ಮ ಅಮೋಘ ಬ್ಯಾಟಿಂಗ್ ಪ್ರದರ್ಶನದ ಮೂಲಕ ಭಾರತದ ಲೆಜೆಂಡ್ ಆಟಗಾರ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹಲವು ದಾಖಲೆಗಳನ್ನು ಧೂಳಿಪಟ ಮಾಡಿರುವ ವಿರಾಟ್ ಕೊಹ್ಲಿ, ಇದೀಗ ಅವರ ಮತ್ತೊಂದು ಐತಿಹಾಸಿಕ ದಾಖಲೆಯನ್ನು ಹಿಂದಿಕ್ಕಿದ್ದಾರೆ.
ಇಷ್ಟಕ್ಕೂ ಯಾವುದೀ ದಾಖಲೆ ಎಂಬ ಪ್ರಶ್ನೆಗೆ ಉತ್ತರ.. ಅದುವೇ ಕ್ರಿಕೆಟ್ ಜಗತ್ತಿನ ವೇಗದ 20 ಸಾವಿರ ರನ್ ಗಳ ದಾಖಲೆ.. ಹೌದು ಈ ದಾಖಲೆ ಮಾಡಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೇವಲ 50 ರನ್ ಬೇಕಿತ್ತು. ಅಂತೂ ವಿಂಡೀಸ್ ವಿರುದ್ಧ ಪಂದ್ಯದಲ್ಲಿ ಈ ಐತಿಹಾಸಿಕ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ ಒಟ್ಟು 417 ಇನ್ನಿಂಗ್ಸ್ ಗಳಲ್ಲಿ (131 ಟೆಸ್ಟ್, 224 ಏಕದಿನ ಮತ್ತು 62 ಟಿ20 ಇನ್ನಿಂಗ್ಸ್ ಗಳು) 20 ಸಾವಿರ ರನ್ ಬಾರಿಸಿ ದಾಖಲೆ ಬರೆದಿದ್ದಾರೆ.
Mt. 20k scaled! @imVkohli becomes the quickest batsman to make 20,000 international runs. He is the third Indian after @sachin_rt and Rahul Dravid to achieve this feat.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


