ವಿಶ್ವಕಪ್ ಕ್ರಿಕೆಟ್: ಶ್ರೀಲಂಕಾ ವಿರುದ್ಧ ದಕ್ಷಿಣ ಆಫ್ರಿಕಾಗೆ 9 ವಿಕೆಟ್ ಗೆಲುವು
ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ದಕ್ಷಿಣ ಆಫ್ರಿಕಾ 9 ವಿಕೆಟ್ ಅಂತರದಿಂದ ಗೆಲುವು ದಾಖಲಿಸಿದೆ. ಇದರಿಂದಾಗಿ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಸೋತಿರುವ ಶ್ರೀಲಂಕಾ ಸೆಮಿಫೈನಲ್ ಹಾದಿ ಮತ್ತಷ್ಟು ಕಠಿಣವೆನಿಸಿದೆ.

Published On :
ಲಂಡನ್ :ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ದಕ್ಷಿಣ ಆಫ್ರಿಕಾ 9 ವಿಕೆಟ್ ಅಂತರದಿಂದ ಗೆಲುವು ದಾಖಲಿಸಿದೆ. ಇದರಿಂದಾಗಿ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಸೋತಿರುವ ಶ್ರೀಲಂಕಾ ಸೆಮಿಫೈನಲ್ ಹಾದಿ ಮತ್ತಷ್ಟು ಕಠಿಣವೆನಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 49.3 ಓವರ್ ಗಳಲ್ಲಿ 203 ರನ್ ಗಳಿಗೆ ಆಲೌಟ್ ಆಯಿತು. ಪಂದ್ಯದ ಪ್ರಥಮ ಎಸೆತದಲ್ಲೇ ಲಂಕಾ ನಾಯಕ ದಿಮುತ್ ಕರುಣಾರತ್ನೆರನ್ನು ಡೆಕ್ ಔಟ್ ಮಾಡಿದ ದಕ್ಷಿಣ ಆಫ್ರಿಕಾ ವೇಗಿ ಕಗಿಸೋ ರಬಡ ಲಂಕಾಗೆ ಆರಂಭಿಕ ಆಘಾತ ನೀಡಿದರು.
ನಂತರ ಕುಸಾಲ್ ಪರೇರಾ ಹಾಗೂ ಅವಿಷ್ಕ ಫೆರ್ನಾಂಡೊ ಜೊತೆಯಾಟದಲ್ಲಿ 67 ರನ್ ಬಂದಿತು. ಆದರೆ, 72 ರನ್ ಆಗುವಷ್ಟರಲ್ಲಿ ಮತ್ತೊಂದು ವಿಕೆಟ್ ಕಳೆದುಕೊಂಡು ಮತ್ತೊಮ್ಮೆ ಸಂಕಷ್ಟಕ್ಕೊಳಗಾಯಿತು.
ನಂತರ ಕುಸಾಲ್ ಮೆಂಡಿಸ್ 23, ಏಂಜೆಲೋ ಮ್ಯಾಥ್ಯೂಸ್ 11, ಧನಂಜಯ ಡಿಸಿಲ್ವ 24, ಹಾಗೂ ಜೀವನ್ ಮೆಂಡಿಸ್ 18 ರನ್ ಗಳಿಸಿ ಫೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ 39.5 ಓವರ್ ಗಳಲ್ಲಿ 163 ರನ್ ಗಳಿಸುವಷ್ಟರಲ್ಲಿ ಏಳು ವಿಕೆಟ್ ಕಳೆದುಕೊಂಡು ಲಂಕಾ ತಂಡ ಭಾರಿ ಸಂಕಷ್ಟಕ್ಕೆ ಸಿಲುಕಿತು. ಅಂತಿಮವಾಗಿ 49.3 ಓವರ್ ಗಳಲ್ಲಿ 203 ರನ್ ಗಳಿಗೆ ತನ್ನೆಲ್ಲ ವಿಕೆಟ್ ಗಳನ್ನು ಕಳೆದುಕೊಂಡಿತು.
ಈ ಗೆಲುವಿನ ಗುರಿ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ 37.2 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 206 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು. ದಕ್ಷಿಣ ಆಫ್ರಿಕಾ ಪರ ಆರಂಭಿಕ ಆಟಗಾರರಾದ ಡಿಕಾಕ್ 15, ಎಚ್ ಎಂ ಆಮ್ಲಾ 80 ಹಾಗೂ ಡು ಪ್ಲೆಸಿಸ್ 96 ರನ್ ಗಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


