ಕ್ರಿಕೆಟ್

ವಿಶ್ವಕಪ್ ಟೂರ್ನಿಯ ಅತ್ಯಂತ ರೋಚಕ ಪಂದ್ಯವಾಗಲಿದೆ, ಭಾರತ ಗೆಲ್ಲುವ ಫೇವರಿಟ್: ಕೆ ಶ್ರೀಕಾಂತ್

ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ನಾಳೆ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಹಣಾಹಣಿ ಟೂರ್ನಿಯ ಅತ್ಯಂತ ರೋಚಕ ಪಂದ್ಯವಾಗಲಿದೆ ಎಂದು ಭಾರತದ ಮಾಜಿ ಕ್ರಿಕೆಟಿಗ ಕೆ ಶ್ರೀಕಾಂತ್ ಹೇಳಿದ್ದಾರೆ.

ವಿಶ್ವಕಪ್ ಟೂರ್ನಿಯ ಅತ್ಯಂತ ರೋಚಕ ಪಂದ್ಯವಾಗಲಿದೆ, ಭಾರತ ಗೆಲ್ಲುವ ಫೇವರಿಟ್: ಕೆ ಶ್ರೀಕಾಂತ್
ಸಂಗ್ರಹ ಚಿತ್ರ
Published On :
ಲಂಡನ್: ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ನಾಳೆ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಹಣಾಹಣಿ ಟೂರ್ನಿಯ ಅತ್ಯಂತ ರೋಚಕ ಪಂದ್ಯವಾಗಲಿದೆ ಎಂದು ಭಾರತದ ಮಾಜಿ ಕ್ರಿಕೆಟಿಗ ಕೆ ಶ್ರೀಕಾಂತ್ ಹೇಳಿದ್ದಾರೆ.
ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಕೆ ಶ್ರೀಕಾಂತ್ ಅವರು, ನಾಳಿನ ಭಾರತ ಮತ್ತು ಇಂಗ್ಲೆಂಡ್ ನಡುವಿನ ಹಣಾಹಣಿ ಇಡೀ ಟೂರ್ನಿಯ ಅತ್ಯಂತ ರೋಚಕ ಪಂದ್ಯವಾಗಿರಲಿದೆ. ನಾಳಿನ ಪಂದ್ಯದಲ್ಲಿ ಭಾರತವೇ ಗೆಲ್ಲುವ ಫೇವರಿಟ್...ಟೂರ್ನಿಯಲ್ಲಿ ಭಾರತೀಯ ಆಟಗಾರರ ನಿರ್ವಹಣೆ ಅತ್ಯುತ್ತಮವಾಗಿದೆ. ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಸೇರಿದಂತೆ ಎಲ್ಲ ವಿಭಾಗಗಳಲ್ಲಿಯೂ ಭಾರತ ಉತ್ತಮ ನಿರ್ವಹಣೆ ತೋರಿದೆ. ಆದರೆ ಇಂಗ್ಲೆಂಡ್ ಕಳೆದ 2 ಪಂದ್ಯಗಳನ್ನು ಸೋತಿರುವ ಇಂಗ್ಲೆಂಡ್ ತಂಡ ನಾಳೆ ಗೆಲ್ಲಲೇಬೇಕು ಎಂಬ ಒತ್ತಡದಲ್ಲಿ ಆಡಲಿದೆ ಎಂದು ಹೇಳಿದ್ದಾರೆ.
ಇನ್ನು ಟೂರ್ನಿಯಲ್ಲಿ ಆಡಿರುವ 6 ಪಂದ್ಯಗಳ ಪೈಕಿ ಭಾರತ ಐದು ಪಂದ್ಯಗಳನ್ನು ಜಯಿಸಿದ್ದು, ನ್ಯೂಜಿಲೆಂಡ್ ವಿರುದ್ಧದ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಹೀಗಾಗಿ ಭಾರತದ ಸೆಮೀಸ್ ಹಾದಿ ಸುಗಮವಾಗಿದೆಯಾದರೂ, ಇಂಗ್ಲೆಂಡ್ ಪಾಲಿಗೆ ನಾಳಿನ ಪಂದ್ಯ ಮಾಡು ಇಲ್ಲವೆ ಮಡಿ ಪಂದ್ಯವಾಗಿದೆ. ಟೂರ್ನಿಯಲ್ಲಿ 7 ಪಂದ್ಯಗಳನ್ನಾಡಿರುವ ಇಂಗ್ಲೆಂಡ್ ತಂಡ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ ಇಂಗ್ಲೆಂಡ್ ತಂಡ ಸೆಮೀಸ್ ಗೆ ಹೋಗಲು ನಾಳಿನ ಪಂದ್ಯವನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆಗೆ ಸಿಲುಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.