ಐಸಿಸಿ ವಿಶ್ವಕಪ್ 2019: ಕಿವೀಸ್ ವಿರುದ್ಧ ಆಸಿಸ್ ಗೆ 86 ರನ್ ಗಳ ಭರ್ಜರಿ ಜಯ
ಲಾರ್ಡ್ಸ್ ನಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡ 86 ರನ್ ಗಳ ಭರ್ಜರಿ ಜಯ ಸಾಧಿಸಿದೆ.

Published On :
ಲಂಡನ್: ಲಾರ್ಡ್ಸ್ ನಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡ 86 ರನ್ ಗಳ ಭರ್ಜರಿ ಜಯ ಸಾಧಿಸಿದೆ.
ಆಸಿಸ್ ನೀಡಿದ 244 ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿದೆ ನ್ಯೂಜಿಲೆಂಡ್ ತಂಡ ಮಿಚೆಲ್ ಸ್ಟಾರ್ಕ್ ಮಾರಕ ಬೌಲಿಂಗ್ ಗೆ ತತ್ತರಿಸಿ ಹೋಯಿತು. ನಾಯಕ ಕೇನ್ ವಿಲಿಯಮ್ಸನ್ (40 ರನ್) ಮತ್ತು ರಾಸ್ ಟೇಲರ್ (30 ರನ್) ರನ್ನು ಬಿಟ್ಟರೆ ಉಳಿದ ಯಾವ ಆಟಗಾರರೂ ಕ್ರೀಸ್ ನಲ್ಲಿ ಗಟ್ಟಿಯಾಗಿ ನೆಲೆಯೂರುವ ಪ್ರಯತ್ನ ಮಾಡಲಿಲ್ಲ. ಅಂತಿಮವಾಗಿ ನ್ಯೂಜಿಲೆಂಡ್ ತಂಡ 43.4 ಓವರ್ ಗಳಲ್ಲಿ 157ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಆ ಮೂಲಕ ಆಸಿಸ್ ಎದುರು ಬರೊಬ್ಬರಿ 86ರನ್ ಗಳ ಹೀನಾಯ ಸೋಲು ಕಂಡಿತು.
ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ತಂಡ ಟ್ರೆಂಟ್ ಬೌಲ್ಟ್ ಅವರ ಮಾರಕ ದಾಳಿಗೆ ತತ್ತರಿಸಿ 243 ರನ್ ಗಳಿಸಿತು. ಬೌಲ್ಟ್ 4 ವಿಕೆಟ್ ಕಬಳಿಸಿದರೆ, ಫರ್ಗುಸನ್, ನೀಶಂ ತಲಾ 2 ವಿಕೆಟ್ ಪಡೆದರೆ, ವಿಲಿಯಮ್ಸನ್ 1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Londonಲಂಡನ್ಆಸ್ಟ್ರೇಲಿಯಾAustraliaNew Zealandನ್ಯೂಜಿಲೆಂಡ್ICC World Cup 2019ಐಸಿಸಿ ವಿಶ್ವಕಪ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


