ಕ್ರಿಕೆಟ್

ಐಸಿಸಿ ವಿಶ್ವಕಪ್ 2019: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 31 ರನ್ ಗಳ ಸೋಲು

ಐಸಿಸಿ ವಿಶ್ವಕಪ್ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ಭಾರತವನ್ನು ಮಣಿಸಿದ ಇಂಗ್ಲೆಂಡ್ ತಂಡ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಐಸಿಸಿ ವಿಶ್ವಕಪ್ 2019: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 31 ರನ್ ಗಳ ಸೋಲು
ಸಂಗ್ರಹ ಚಿತ್ರ
Published On :
ಲಂಡನ್: ಐಸಿಸಿ ವಿಶ್ವಕಪ್ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ಭಾರತವನ್ನು ಮಣಿಸಿದ ಇಂಗ್ಲೆಂಡ್ ತಂಡ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಇಂಗ್ಲೆಂಡ್ ನೀಡಿದ 338 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 306 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 31 ರನ್ ಗಳ ಅಂತರದಲ್ಲಿ ಇಂಗ್ಲೆಂಡ್ ಗೆ ಶರಣಾಯಿತು. 

338 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡಕ್ಕೆ ಕ್ರಿಸ್ ವೋಕ್ಸ್ ಆರಂಭಿಕ ಆಘಾತ ನೀಡಿದರು. ಕೆಎಲ್ ರಾಹುಲ್ ರನ್ನು ಶೂನ್ಯಕ್ಕೆ ಔಟ್ ಮಾಡುವ ಮೂಲಕ ಭಾರತ ತಂಡದ ಪತನಕ್ಕೆ ಕಾರಣರಾದರು. ಆ ಬಳಿಕ ರೋಹಿತ್ ಜೊತೆಗೂಡಿದ ನಾಯಕ ವಿರಾಟ್ ಕೊಹ್ಲಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಅಂತೆಯೇ ಅತ್ಯುತ್ತಮವಾಗಿ ಬ್ಯಾಟ್ ಬೀಸಿದ ಕೊಹ್ಲಿ 76 ಎಸೆತಗಳಲ್ಲಿ 66 ರನ್ ಗಳಿಸಿ ಪ್ಲಂಕೆಟ್ ವಿಕೆಟ್ ಒಪ್ಪಿಸಿದರು. ಅಷ್ಟು ಹೊತ್ತಿಗಾಗಲೇ ರೋಹಿತ್ ಶರ್ಮಾ ಕೂಡ ಅರ್ಧಶತಕ ಸಿಡಿಸಿ ಶತಕದತ್ತ ಮುನ್ನುಗ್ಗಿದ್ದರು. 

ರಿಷಬ್ ಪಂತ್ ಜೊತೆಗೂಡಿಗ ರೋಹಿತ್ ಶರ್ಮಾ 109 ಎಸೆತಗಳಲ್ಲಿ 102 ರನ್ ಗಳಿಸಿ ಮತ್ತೆ ಕ್ರಿಸ್ ವೋಕ್ಸ್ ಗೆ ವಿಕೆಟ್ ಒಪ್ಪಿಸಿದರು. ಬಳಿಕ ರಿಷಬ್ ಪಂತ್ ಕೂಡ 32 ರನ್ ಗಳಿಸಿ ಪ್ಲಂಕೆಟ್ ಗೆ ಬಲಿಯಾದರು. ಧೋನಿ ಜೊತೆಗೂಡಿದ ಹಾರ್ದಿಕ್ ಪಾಂಡ್ಯ ಭರ್ಜರಿ ಹೊಡೆತಗಳ ಮೂಲಕ 45 ರನ್ ಗಳಿಸಿ ಅರ್ಧಶತಕದ ಹೊಸ್ತಿಲಿಗೆ ಬಂದರಾದರೂ, ಪ್ಲಂಕೆಟ್ ಬೌಲಿಂಗ್ ನಲ್ಲಿ ಕ್ಯಾಚ್ ನೀಡಿ ಹೊರ ನಡೆದರು. ಬಳಿಕ ಬಂದ ಧೋನಿ ಅಂತಿಮ ಎಸೆತದವರೆಗೂ ಕ್ರೀಸ್ ನಲ್ಲಿ ನಿಂತರಾದರೂ, ಭಾರತ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು. 

ಅಂತಿಮವಾಗಿ ಭಾರತ ತಂಡ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 306 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 31 ರನ್ ಗಳ ಅಂತರದಲ್ಲಿ ಸೋಲು ಕಂಡಿತು. ಟೂರ್ನಿಯಲ್ಲಿ ಇಲ್ಲಿಯವರೆಗೂ ಅಜೇಯವಾಗಿ ಉಳಿದಿದ್ದ ಭಾರತ ತಂಡಕ್ಕೆ ಇದು ಮೊದಲ ಸೋಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.