ಕ್ರಿಕೆಟ್

ಭಾರತ-ಇಂಗ್ಲೆಂಡ್ ಹಣಾಹಣಿ: ಭಾರತಕ್ಕೆ ಕಾಶ್ಮೀರ, ಕೊಹಿನೂರ್ ವಜ್ರದ ಆಮಿಷ, ಟ್ವಿಟರ್ ನಲ್ಲಿ ಮೀಮ್ ಗಳ ಸುರಿಮಳೆ

ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯ ಇಡೀ ವಿಶ್ವದ ಗಮನ ಸೆಳೆದಿದ್ದು, ಪ್ರಮುಖವಾಗಿ ಪಾಕಿಸ್ತಾನಕ್ಕೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.

ಭಾರತ-ಇಂಗ್ಲೆಂಡ್ ಹಣಾಹಣಿ: ಭಾರತಕ್ಕೆ ಕಾಶ್ಮೀರ, ಕೊಹಿನೂರ್ ವಜ್ರದ ಆಮಿಷ, ಟ್ವಿಟರ್ ನಲ್ಲಿ ಮೀಮ್ ಗಳ ಸುರಿಮಳೆ
ಸಂಗ್ರಹ ಚಿತ್ರ
Published On :
ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯ ಇಡೀ ವಿಶ್ವದ ಗಮನ ಸೆಳೆದಿದ್ದು, ಪ್ರಮುಖವಾಗಿ ಪಾಕಿಸ್ತಾನಕ್ಕೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.
ಅತ್ತ ಇಂಗ್ಲೆಂಡ್ ತಂಡ ಸೆಮೀಸ್ ನಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಳ್ಳಲು ಹರಸಾಹಸ ಪಡುತ್ತಿದ್ದರೆ, ಇತ್ತ ಪಾಕಿಸ್ತಾನ ಮತ್ತು ಇಂಗ್ಲೆಂಡ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಕಾಲೆಳೆದುಕೊಂಡು ಭಾರತದ ಸೋಲು, ಗೆಲುವಿಗೆ ಪ್ರಾರ್ಥಿಸುತ್ತಿದ್ದಾರೆ.
ಇತ್ತ ಪಾಕಿಸ್ತಾನದ ಅಭಿಮಾನಿಗಳು ಭಾರತ ಗೆದ್ದರೆ ಉಗ್ರ ಮಸೂದ್ ಅಜರ್ ಮತ್ತು ಕಾಶ್ಮೀರವನ್ನು ಬಿಟ್ಟುಕೊಡುವುದಾಗಿ ಹೇಳಿದರೆ, ಅತ್ತ ಇಂಗ್ಲೆಂಡ್ ಅಭಿಮಾನಿಗಳು ಭಾರತದಿಂದ ಹೊತ್ತು ತಂದ ಕೊಹಿನೂರ್ ವಜ್ರವನ್ನು ಕೊಡುವುದಾಗಿ ಭಾರತಕ್ಕೆ ಆಮಿಷ ಒಡ್ಡುತ್ತಿರುವ ಮೀಮ್ ಗಳು ತುಂಬಾ ಹಾಸ್ಯ ಭರಿತವಾಗಿವೆ.
ಭಾರತ ಮತ್ತು ಇಂಗ್ಲೆಂಡ್ ಹಣಾಹಣಿ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಸುದ್ದಿಯಾಗುತ್ತಿರುವ ಕೆಲ ಮೀಮ್ ಗಳು ಇಲ್ಲಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.