ಜಾದವ್, ಧೋನಿ ಅದ್ಭುತ ಆಟ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯ ಗೆದ್ದ ಟೀಂ ಇಂಡಿಯಾ!
ಟಿ20 ಸರಣಿ ಸೋಲಿನ ಮುಖಭಂಗ ಅನುಭವಿಸಿದ್ದ ಟೀಂ ಇಂಡಿಯಾ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 6 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

Published On :
ಹೈದರಾಬಾದ್: ಟಿ20 ಸರಣಿ ಸೋಲಿನ ಮುಖಭಂಗ ಅನುಭವಿಸಿದ್ದ ಟೀಂ ಇಂಡಿಯಾ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 6 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ ಗಳಿಂದ ಜಯಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 236 ರನ್ ಪೇರಿಸಿತ್ತು. 237 ರನ್ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಎಂಎಸ್ ಧೋನಿ ಅಜೇಯ 59 ರನ್ ಹಾಗೂ ಕೇದಾರ್ ಜಾದವ್ ಅಜೇಯ 81 ರನ್ ಗಳಿಸಿ ತಂಡಕ್ಕೆ ಗೆಲುವು ತಂದು ಕೊಟ್ಟರು.
ಆಸ್ಟ್ರೇಲಿಯಾ ಪರ ಬ್ಯಾಟಿಂಗ್ ಉಸ್ಮಾನ್ ಖವಾಜ 50, ಸ್ಟೋಯ್ನಿಸ್ 37, ಮ್ಯಾಕ್ಸ್ ವೇಲ್ 40, ಕರ್ರಿ ಅಜೇಯ 36 ರನ್ ಗಳಿಸಿದ್ದಾರೆ.
ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಮೊಹಮ್ಮದ್ ಶಮಿ, ಜಸ್ ಪ್ರೀತ್ ಬುಮ್ರಾ, ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


