ವಿಶ್ವಕಪ್ ಕ್ರಿಕೆಟ್: ಟೀಂ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ
ಮುಂಬರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಗಾಗಿ ಭಾರತೀಯ ಕ್ರಿಕೆಟ್ ತಂಡದ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಲಾಗಿದೆ.

Published On :
ಹೈದ್ರಾಬಾದ್: ಮುಂಬರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಗಾಗಿ ಭಾರತೀಯ ಕ್ರಿಕೆಟ್ ತಂಡದ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಲಾಗಿದೆ.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ಮಹೇಂದ್ರ ಸಿಂಗ್ ಧೋನಿ, ಪೃಥ್ವಿ ಶಾ ಹಾಗೂ ಮಹಿಳಾ ತಂಡದ ಹರ್ಮನ್ ಪ್ರೀತ್ ಕೌರ್ ಹಾಗೂ ಜೆಮಿಮಾ ರೊಡ್ರಿಗಸ್ ಜೆರ್ಸಿ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಏಕದಿನ ಕ್ರಿಕೆಟ್ ಸರಣಿ ಸಂದರ್ಭಕ್ಕಾಗಿ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಮೈದಾನದಲ್ಲಿ ಆಡಲು ಅನುಕೂಲಕರವಾಗಿದೆ ಎಂದು ಟೀಂ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.
ಆಶ್ಚರ್ಯಕರ ಸಂಗತಿ ಎಂದರೆ, ಈ ಹಿಂದೆ 1983ರಲ್ಲಿ ನಡೆದ ಮೊದಲ ವಿಶ್ವಕಪ್, ಟಿ-20 ವಿಶ್ವಕಪ್ ಹಾಗೂ ಎರಡನೇ ಬಾರಿಗೆ ಸೀಮಿತ ಓವರ್ ಗಳ ಪಂದ್ಯದ ಸಂದರ್ಭದಲ್ಲಿ ಜೆರ್ಸಿ ಬದಲಾಯಿಸಿದ ಸಂದರ್ಭದಲ್ಲಿ ಭಾರತ ಗೆದ್ದಿರುವುದಾಗಿ ರೋಹಿತ್ ಶರ್ಮಾ ಹೇಳಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ವಿರಾಟ್ ಕೊಹ್ಲಿMS DhoniWorld Cupಎಂಎಸ್ ಧೋನಿಹೊಸ ಜೆರ್ಸಿViratKohliಹರ್ಮನ್ ಪ್ರೀತ್ ಕೌರ್New jerseyHarmanpreet Kaur ವಿಶ್ವಕಪ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


