ಆಸಿಸ್ ವಿರುದ್ಧ ಭರ್ಜರಿ ಗೆಲುವು; ವಿಂಡೀಸ್ ದಂತಕಥೆ ವಿವಿಯನ್ ರಿಚರ್ಡ್ಸ್ ದಾಖಲೆ ಮುರಿದ ಕ್ಯಾಪ್ಟನ್ ಕೊಹ್ಲಿ!
ಮುತ್ತಿನ ನಗರಿ ಹೈದರಾಬಾದ್ ನಲ್ಲಿ ನಿನ್ನೆ ನಡೆದ ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಅತಿಥೇಯ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದೆ. ಅಂತೆಯೇ ತಂಡದ ನಾಯಕ ವಿರಾಟ್ ಕೊಹ್ಲಿ ಅಪೂರ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

Published On :
ಹೈದರಾಬಾದ್: ಮುತ್ತಿನ ನಗರಿ ಹೈದರಾಬಾದ್ ನಲ್ಲಿ ನಿನ್ನೆ ನಡೆದ ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಅತಿಥೇಯ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದೆ. ಅಂತೆಯೇ ತಂಡದ ನಾಯಕ ವಿರಾಟ್ ಕೊಹ್ಲಿ ಅಪೂರ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
ಹೌದು.. ಈ ಪಂದ್ಯದ ಗೆಲುವಿನ ಮೂಲಕ ನಾಯಕ ವಿರಾಟ್ ಕೊಹ್ಲಿ ವಿಂಡೀಸ್ ಕ್ರಿಕೆಟ್ ದಂತಕಥೆ ವಿವಿಯನ್ ರಿಚರ್ಡ್ಸ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ನಿನ್ನೆಯ ಪಂದ್ಯದ ಗೆಲುವಿನ ಮೂಲಕ ಕೊಹ್ಲಿ ತಮ್ಮ ನಾಯಕತ್ವದ ಗೆಲುವಿನ ಪಂದ್ಯಗಳ ಸಂಖ್ಯೆಯನ್ನು 48ಕ್ಕೆ ಏರಿಕೆ ಮಾಡಿಕೊಂಡರು. ಅಂತೆಯೇ ಕೊಹ್ಲಿ ಅಪರೂಪದ ದಾಖಲೆಯನ್ನು ನಿರ್ಮಿಸಿದ್ದು, ವಿಂಡೀಸ್ ದಂತಕಥೆ ವಿವಿಯನ್ ರಿಚರ್ಡ್ಸ್ ಅವರ ದಾಖಲೆಯನ್ನು ಕೊಹ್ಲಿ ಹಿಂದಿಕ್ಕಿದ್ದಾರೆ.
ವಿವಿಯನ್ ರಿಚರ್ಡ್ಸ್ ಅವರ ನಾಯಕತ್ವದಲ್ಲಿ ವಿಂಡೀಸ್ ತಂಡ ಒಟ್ಟು 47 ಏಕದಿನ ಪಂದ್ಯಗಳನ್ನು ಗೆದ್ದಿದ್ದು, 48 ಪಂದ್ಯಗಳನ್ನು ಗೆಲ್ಲುವ ಮೂಲಕ ಕ್ಯಾಪ್ಟನ್ ಕೊಹ್ಲಿ ವಿವಿಯನ್ ರಿಚರ್ಡ್ಸ್ ದಾಖಲೆಯನ್ನು ಮುರಿದಿದ್ದಾರೆ. ಅಂತೆಯೇ ಈ ಪಟ್ಟಿಯಲ್ಲಿ ಕೊಹ್ಲಿ 3ನೇ ಸ್ಥಾನಕ್ಕೇರಿದ್ದಾರೆ.
ಏಕದಿನ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಏಕದಿನ ಪಂದ್ಯಗಳನ್ನು ಗೆದ್ದ ನಾಯಕರ ಪಟ್ಟಿಯಲ್ಲಿ ಆಸ್ಟ್ರೇಲಿಯಾ ನಾಯಕ ರಿಕ್ಕಿ ಪಾಂಟಿಂಗ್ ಅಗ್ರ ಸ್ಥಾನದಲ್ಲಿದ್ದು, ಪಾಟಿಂಗ್ ನಾಯಕತ್ವದಲ್ಲಿ ಆಸಿಸ್ ತಂಡ ಒಟ್ಟು 51 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇನ್ನು ಎರಡನೇ ಸ್ಥಾನದಲ್ಲಿ ಮತ್ತೆ ವೆಸ್ಟ್ ಇಂಡೀಸ್ ತಂಡದ ಮತ್ತೋಂದು ಕ್ರಿಕೆಟ್ ದಂತಕಥೆ ಕ್ಲೈವ್ ಲಾಯ್ಡ್ ಇದ್ದು, ಕ್ಲೈವ್ ಲಾಯ್ಡ್ ನಾಯಕತ್ವದಲ್ಲಿ ವಿಂಡೀಸ್ ತಂಡ 50 ಪಂದ್ಯಗಳಲ್ಲಿ ಜಯಗಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
hyderabadಹೈದರಾಬಾದ್Virat Kohliವಿರಾಟ್ ಕೊಹ್ಲಿIndia vs Australiaಭಾರತ ವರ್ಸಸ್ ಆಸ್ಟ್ರೇಲಿಯಾCricket Offbeatಕ್ರಿಕೆಟ್ ಸ್ವಾರಸ್ಯವಿವಿಯನ್ ರಿಚರ್ಡ್ಸ್Viv Richards
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


