ಐಪಿಎಲ್ ಆರಂಭಕ್ಕೂ ಮುನ್ನವೇ ಆರ್ಸಿಬಿಗೆ ದೊಡ್ಡ ಶಾಕ್? ಎಬಿಡಿಗೆ ಏನಾಯ್ತು!
2019ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಟೂರ್ನಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ದೊಡ್ಡ ಶಾಕ್ ಎದುರಾಗಲಿದೆ.

Published On :
ಬೆಂಗಳೂರು: 2019ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಟೂರ್ನಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ದೊಡ್ಡ ಶಾಕ್ ಎದುರಾಗಲಿದೆ.
ಐಪಿಎಲ್ ಆರಂಭಿಕ ಪಂದ್ಯದಲ್ಲಿ ಚೆನ್ನೈ ತಂಡವನ್ನು ಆರ್ಸಿಬಿಗೆ ಎದುರಿಸಲಿದ್ದು ಈ ಮಧ್ಯೆ ಆರ್ಸಿಬಿ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಅನುಪಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಹೌದು ಎಬಿಡಿ ವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್ ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ.
ಇನ್ನು ಮಾರ್ಚ್ 23ರಿಂದ ಐಪಿಎಲ್ ಟೂರ್ನಿ ಆರಂಭವಾಗುತ್ತಿದ್ದು ಅಷ್ಟರಲ್ಲಿ ಫಿಟ್ ಆಗುತ್ತಾರಾ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿವೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ ಬಾಕಿ ಇದ್ದು. ಐಪಿಎಲ್ ನಿಂದ ದೂರ ಉಳಿಯುತ್ತಾರೆ ಎನ್ನಲಾಗುತ್ತಿದೆ. ಆದರೆ ಮತ್ತೊಂದು ಮಾಹಿತಿಯ ಪ್ರಕಾರ ಐಪಿಎಲ್ ವೇಳೆ ಚೇತರಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಪಾಕಿಸ್ತಾನ ಸೂಪರ್ ಲೀಗ್ ಗೂ ಮುನ್ನ ಬಾಂಗ್ಲಾ ಲೀಗ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದ ಎಬಿಡಿ ಉತ್ತಮ ಪ್ರದರ್ಶನ ನೀಡಿದ್ದರು. ಆದರೆ ಸದ್ಯ ವೈದ್ಯರು ಕನಿಷ್ಠ 2 ವಾರಗಳ ವಿಶ್ರಾಂತಿ ಸೂಚಿಸಿದ್ದು ಆ ಬಳಿಕಷ್ಟೇ ತರಬೇತಿಗೆ ಹಾರಾಗಲಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Virat Kohliವಿರಾಟ್ ಕೊಹ್ಲಿAB de VilliersRCBಆರ್ಸಿಬಿCricket Offbeatಕ್ರಿಕೆಟ್ ಸ್ವಾರಸ್ಯಎಬಿಡಿ ವಿಲಿಯರ್ಸ್IPL 2019ಐಪಿಎಲ್ 2019
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


