ಭಾರತೀಯ ಸೇನಾ ಕ್ಯಾಪ್ ಕ್ಯಾತೆ ತೆಗೆದ ಪಾಕ್‌ಗೆ ಚೀಮಾರಿ ಹಾಕಿದ ಐಸಿಸಿ!
ಹುತಾತ್ಮ ಭಾರತೀಯ ಯೋಧರಿಗೆ ಗೌರವ ಸಲ್ಲಿಸುವ ಸಲುವಾಗಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು...

Published On :
ಹೈದರಾಬಾದ್: ಹುತಾತ್ಮ ಭಾರತೀಯ ಯೋಧರಿಗೆ ಗೌರವ ಸಲ್ಲಿಸುವ ಸಲುವಾಗಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಸೇನಾ ಕ್ಯಾಪ್ ಧರಿಸಿದ್ದಕ್ಕೆ ಪಾಕಿಸ್ತಾನ ಕ್ಯಾತೆ ತೆಗೆದ್ದಿದ್ದು ಇದೀಗ ಐಸಿಸಿ ಮುಂದೆ ಮುಖಭಂಗ ಅನುಭವಿಸಿದೆ.
ಮಾರ್ಚ್ 8ರಂದು ರಾಂಚಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಸೇನಾ ಕ್ಯಾಪ್ ಧರಿಸಿ ಟೀಂ ಇಂಡಿಯಾ ಮೈದಾನಕ್ಕಿಳಿದಿದ್ದು ಇದಕ್ಕೆ ಕ್ಯಾತೆ ತೆಗೆದಿದ್ದ ಪಾಕ್ ಐಸಿಸಿಗೆ ದೂರು ನೀಡಿತ್ತು. ಅಲ್ಲದೆ ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಹೇಳಿತ್ತು.
ಇದಕ್ಕೆ ಪ್ರತಿಕ್ರಿಯಿಸಿದ ಐಸಿಸಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಸೇನಾ ಕ್ಯಾಪ್ ಧರಿಸುವ ಸಲುವಾಗಿ ಅನುಮತಿ ಪಡೆದಿತ್ತು ಎಂದಿದೆ.
ಬಿಸಿಸಿಐ ಆರ್ಮಿ ಕ್ಯಾಪ್ ಧರಿಸಿ ಆಡುವ ಬಗ್ಗೆ ಹಾಗೂ ಪಂದ್ಯದ ಸಂಭಾವನೆ ಸೈನಿಕರ ನಿಧಿಗೆ ನೀಡುವ ಕುರಿತು ಐಸಿಸಿ ಸಿಇಒ ಡೇವ್ ರಿಚರ್ಡ್ ಸನ್ ಬಳಿ ಅನುಮತಿ ಪಡೆದಿತ್ತು ಎಂದು ಐಸಿಸಿ ಸ್ಪಷ್ಟನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


