5ನೇ ಏಕದಿನ ಪಂದ್ಯ; ಸಿರೀಸ್ ಡಿಸೈಡರ್ ಮ್ಯಾಚ್ ನಲ್ಲಿ ಟಾಸ್ ಗೆದ್ದ ಆಸಿಸ್ ಬ್ಯಾಟಿಂಗ್ ಆಯ್ಕೆ!
ಭಾರತ ತಂಡದ ವಿರುದ್ಧ ಅಂತಿಮ ಹಾಗೂ 5ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

Published On :
ನವದೆಹಲಿ: ಭಾರತ ತಂಡದ ವಿರುದ್ಧ ಅಂತಿಮ ಹಾಗೂ 5ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಸರಣಿಯಲ್ಲಿ ಮೊದಲೆರಡು ಪಂದ್ಯಗಳನ್ನು ಸೋತರೂ ಆ ಬಳಿಕ 2 ಪಂದ್ಯಗಳಲ್ಲಿ ರೋಚಕ ಜಯ ಗಳಿಸುವ ಮೂಲಕ ಆಸಿಸ್ ಪಡೆ ಗೆಲುವಿನ ಟ್ರ್ಯಾಕ್ ಮರಳಿದ್ದು, ಈ ಪಂದ್ಯವನ್ನೂ ಗೆದ್ದು ಹ್ಯಾಟ್ರಿಕ್ ಗೆಲುವಿನ ಮೂಲಕ ಸರಣಿ ಕೈ ವಶ ಮಾಡಿಕೊಂಡು ತವರಿಗೆ ಮರಳುವ ವಿಶ್ವಾಸದಲ್ಲಿದೆ. ಅಂತೆಯೇ ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಆ ಬಳಿಕ ಎರಡು ಪಂದ್ಯಗಳಲ್ಲಿ ತಾನೇ ಮಾಡಿದ್ದ ಯಡವಟ್ಟುಗಳಿಂದಾಗಿ ಸೋಲು ಕಂಡಿದ್ದ ಭಾರತ ಈ ಪಂದ್ಯದಲ್ಲಿ ತನ್ನ ತಪ್ಪುಗಳನ್ನು ಸುಧಾರಿಸಿಕೊಂಡು ಆಡಿ ಪಂದ್ಯ ಗೆಲ್ಲುವುದರೊಂದಿಗೆ ಸರಣಿ ಕೈವಶ ಮಾಡಿಕೊಂಡು ವಿಶ್ವಕಪ್ ಗೆ ತಯಾರಿ ನಡೆಸಲು ಮುಂದಾಗಿದೆ.
ಒಟ್ಟಾರೆ ಇಂದಿನ ಸಿರೀಸ್ ಡಿಸೈಡರ್ ಮ್ಯಾಚ್ ವಿಶ್ವಕಪ್ ಗೆ ಪೂರ್ವಭಾವಿ ತರಬೇತಿ ಪಂದ್ಯವಾಗಿ ಮಾತ್ರವೇ ಅಲ್ಲದೇ ಸರಣಿ ಯಾರ ಮುಡಿಗೇರಲಿದೆ ಎಂಬ ವಿಚಾರದಿಂದಾಗಿಯೂ ಮಹತ್ವ ಪಡೆದುಕೊಂಡಿದೆ.
ತಂಡಗಳು ಇಂತಿವೆ
ಭಾರತ
ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಕೇದಾರ ಜಾಧವ್, ವಿಜಯ್ ಶಂಕರ್, ರವೀಂದ್ರ ಜಡೇಜಾ, ಭುವನೇಶ್ವರ ಕುಮಾರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರಿತ್ ಬುಮ್ರಾ
ಆಸ್ಟ್ರೇಲಿಯಾ
ಆರನ್ ಫಿಂಚ್ (ನಾಯಕ), ಉಸ್ಮಾನ್ ಖವಾಜಾ, ಪೀಟರ್ ಹ್ಯಾಂಡ್ಸ್ಕಾಂಬ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್ವೆಲ್, ಆಷ್ಟನ್ ಟರ್ನರ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಜೆಯೀ ರಿಚರ್ಡ್ಸನ್, ಪ್ಯಾಟ್ ಕಮ್ಮಿನ್ಸ್, ಆಡಮ್ ಜಂಪಾ, ನಾಥನ್ ಲಿಯಾನ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ನವದೆಹಲಿNew Delhiindiaಭಾರತಆಸ್ಟ್ರೇಲಿಯಾAustraliaVirat Kohliವಿರಾಟ್ ಕೊಹ್ಲಿ5th ODI5 ನೇ ಏಕದಿನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


