2019 ಕನ್ನಡಿಗರಿಗೆ ಚೊಚ್ಚಲ ಪ್ರಶಸ್ತಿ ಗೆಲುವಿನ ಸುರಿಮಳೆ, ಮುಷ್ತಾಕ್ ಅಲಿ ಟೂರ್ನಿ ಗೆದ್ದ ಕರ್ನಾಟಕ!
2019 ಕ್ರೀಡಾ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪ್ರಶಸ್ತಿಗಳ ಸುರಿಮಳೆಯಾಗಿದೆ. ಮೊದಲಿಗೆ ಬೆಂಗಳೂರು ತಂಡ ಪ್ರೊ ಕಬಡ್ಡಿ ಲೀಗ್ ನಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದ ಸಾಧನೆ ಮಾಡಿತ್ತು.

Published On :
2019 ಕ್ರೀಡಾ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪ್ರಶಸ್ತಿಗಳ ಸುರಿಮಳೆಯಾಗಿದೆ. ಮೊದಲಿಗೆ ಬೆಂಗಳೂರು ತಂಡ ಪ್ರೊ ಕಬಡ್ಡಿ ಲೀಗ್ ನಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದ ಸಾಧನೆ ಮಾಡಿತ್ತು. ಇದಾದ ಬಳಿಕ ಪಿಬಿಎಲ್ ನಲ್ಲೂ ಬೆಂಗಳೂರು ಚೊಚ್ಚಲ ಬಾರಿಗೆ ಪ್ರಶಸ್ತಿ ಗೆದ್ದ ಸಾಧನೆ ಮಾಡಿತ್ತು.
ಇದೀಗ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಕರ್ನಾಟಕ ತಂಡ ಮೊದಲ ಬಾರಿಗೆ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಹಾರಾಷ್ಟ್ರ ತಂಡವನ್ನು 155 ರನ್ ಗಳಿಗೆ ಕಟ್ಟಿ ಹಾಕಲಾಯಿತು.
ಮಹಾರಾಷ್ಟ್ರ ನೀಡಿದ 156 ರನ್ ಗಳ ಗುರಿ ಪಡೆದ ಕರ್ನಾಟಕ ತಂಡದ ಪರ ರೋಹನ್ ಕದಂ ಹಾಗೂ ಮಯಾಂಕ್ ಅಗರ್ ವಾಲ್ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ತಂಡ ಮೊದಲ ಬಾರಿಗೆ ಚೊಚ್ಚಲ ಪ್ರಶಸ್ತಿ ಗೆದ್ದು ಬೀಗಿತು.
ಇನ್ನು ರಣಜಿ ಹಾಗೂ ವಿಜಯ್ ಹಜಾರೆ ಟೂರ್ನಿಯಲ್ಲಿ ಅನುಭವಿಸಿದ್ದ ಸೋಲನ್ನು ಮೀರಿ ಕರ್ನಾಟಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮಹಾರಾಷ್ಟ್ರMaharashtraKarnatakaಕರ್ನಾಟಕSyed Mushtaq Ali Trophy 2019T20 Titleಸೈಯದ್ ಮುಷ್ತಾಕ್ ಅಲಿ ಟ್ರೋಫಿ 2019ಟಿ20 ಟೈಟಲ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


