ಟಿ20 ಪಂದ್ಯ ಟೈ: ಸೂಪರ್ ಓವರ್‌ನಲ್ಲಿ ಲಂಕಾ ವಿರುದ್ಧ ಆಫ್ರಿಕಾಗೆ ರೋಚಕ ಗೆಲುವು!
ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಪಂದ್ಯ ಟೈನಲ್ಲಿ ಅಂತ್ಯಕೊಂಡಿದ್ದು ಸೂಪರ್ ಓವರ್‌ನಲ್ಲಿ ಆಫ್ರಿಕಾ ಲಂಕಾ ವಿರುದ್ಧ ರೋಚಕ ಗೆಲುವು ಸಾಧಿಸಿದೆ.

Published On :
ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಪಂದ್ಯ ಟೈನಲ್ಲಿ ಅಂತ್ಯಕೊಂಡಿದ್ದು ಸೂಪರ್ ಓವರ್‌ನಲ್ಲಿ ಆಫ್ರಿಕಾ ಲಂಕಾ ವಿರುದ್ಧ ರೋಚಕ ಗೆಲುವು ಸಾಧಿಸಿದೆ.
ಕೇಪ್ ಟೌನ್ ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾ ತಂಡ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 134 ರನ್ ಪೇರಿಸಿತ್ತು. 135 ರನ್ ಗುರಿ ಬೆನ್ನಟ್ಟಿದ ಆಫ್ರಿಕಾ ತಂಡ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 134 ರನ್ ಪೇರಿಸಲಷ್ಟೇ ಸಾಧ್ಯವಾಗಿದ್ದು ಇದರೊಂದಿಗೆ ಪಂದ್ಯದ ಟೈ ಆಗಿತ್ತು.
ನಂತರ ಸೂಪರ್ ಓವರ್ ನೀಡಲಾಗಿದ್ದು ಇದರಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ದಕ್ಷಿಣ ಆಫ್ರಿಕಾ 14 ರನ್ ಪೇರಿಸಿತ್ತು. 15 ರನ್ ಗುರಿ ಪಡೆದ ಶ್ರೀಲಂಕಾ ತಂಡ ಬ್ಯಾಟ್ಸ್ ಮನ್ ಗಳು ಇಮ್ರಾನ್ ತಾಹೀರ್ ಬೌಲಿಂಗ್ ಗೆ ತತ್ತರಿಸಿದ್ದು ಕೇವಲ 5 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಇದರೊಂದಿಗೆ ದಕ್ಷಿಣ ಆಫ್ರಿಕಾ 8 ರನ್ ಗಳಿಂದ ಗೆಲುವು ಸಾಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


