ಐಪಿಎಲ್ 2019: ಭುಜದ ಗಾಯದಿಂದ ಜಸ್ ಪ್ರೀತ್ ಬುಮ್ರಾ ಗುಣಮುಖ, ಟೀಂ ಇಂಡಿಯಾಗೆ ಆತಂಕ ದೂರ!
2019ರ ಐಪಿಎಲ್ ಪಂದ್ಯಾವಳಿಯ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಭುಜದ ನೋವಿಗೆ ಒಳಗಾಗಿದ್ದ ಮುಂಬೈ ಇಂಡಿಯನ್ಸ್ ಹಾಗೂ ಭಾರತದ ವೇಗಿ ಜಸ್ಪ್ರಿತ್ ಬುಮ್ರಾ ಗುಣಮುಖರಾಗಿದ್ದಾರೆ

Published On :
ಮುಂಬೈ: 2019ರ ಐಪಿಎಲ್ ಪಂದ್ಯಾವಳಿಯ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಭುಜದ ನೋವಿಗೆ ಒಳಗಾಗಿದ್ದ ಮುಂಬೈ ಇಂಡಿಯನ್ಸ್ ಹಾಗೂ ಭಾರತದ ವೇಗಿ ಜಸ್ಪ್ರಿತ್ ಬುಮ್ರಾ ಗುಣಮುಖರಾಗಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ವ್ಯವಸ್ಥಾಪಕ ಮಂಡಳಿ ತಿಳಿಸಿದೆ.
ಭಾನುವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಋಷಭ ಪಂತ್ ಅವರು ಹೊಡೆದ ಚೆಂಡನ್ನು ತಡೆಯಲು ಹೋಗಿ ಬುಮ್ರಾ ಎಡ ಭುಜಕ್ಕೆ ಗಾಯ ಮಾಡಿಕೊಂಡಿದ್ದರು.
ಪಂತ್ ಹೊಡೆದ ಚೆಂಡನ್ನು ತಡೆಯಲು ಬುಮ್ರಾ ಪ್ರಯತ್ನಿಸಿದರಾದರೂ ಅದನ್ನು ನಿಲ್ಲಿಸಲು ವಿಫಲರಾದರು. ಈ ವೇಳೆ ಭುಜಕ್ಕೆ ಗಾಯವಾಗಿ ತೀವ್ರ ನೋವು ಕಾಣಿಸಿಕೊಂಡು ನೆಲಕ್ಕೆ ಬಿದ್ದು, ಮೈದಾನದಿಂದ ಹೊರ ನಡೆದಿದ್ದರು. ಮುಂಬೈ ತನ್ನ ಒಂಬತ್ತು ವಿಕೆಟ್ ಗಳನ್ನು ಕಳೆದುಕೊಂಡಾಗ ಇನ್ನೂ 37 ರನ್ ಗಳ ಅವಶ್ಯಕತೆ ಇತ್ತು. ಆದರೆ, ಬುಮ್ರಾ ಅವರು ಭುಜದ ನೋವಿನಿಂದ ಮತ್ತೆ ಆಟಕ್ಕಿಳಿಯಲಿಲ್ಲ. ಹೀಗಾಗಿ ಮುಂಬೈ ಇಂಡಿಯನ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 37 ರನ್ ಗಳ ಸೋಲನುಭವಿಸಿತು.
ಐಸಿಸಿ ವಿಶ‍್ವಕಪ್ ಇನ್ನೂ ಕೆಲವೇ ದಿನಗಳು ಬಾಕಿ ಇದ್ದುದ್ದರಿಂದ ಬುಮ್ರಾ ಅವರ ಭುಜದ ನೋವು ಭಾರತೀಯ ತಂಡದಲ್ಲಿ ಆತಂಕ ಸೃಷ್ಟಿಸಿತ್ತು. ಇದೀಗ ಬುಮ್ರಾ ಅವರು ಗಾಯದಿಂದ ಗುಣಮುಖರಾಗಿದ್ದು, ಸೋಮವಾರ ಮುಂದಿನ ನಡೆ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಮುಂಬೈ ಇಂಡಿಯನ್ಸ್ ತಂಡದ ವ್ಯವಸ್ಥಾಪಕ ಮಂಡಳಿ ತಿಳಿಸಿದೆ.
25 ವರ್ಷದ ಬುಮ್ರಾ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯದಲ್ಲಿ 40 ರನ್ ಗಳನ್ನು ನೀಡಿ ತಮ್ಮ ಕೊನೆಯ ಎಸೆತದಲ್ಲಿ ಭುಜದ ಗಾಯಕ್ಕೆ ಒಳಗಾಗಿದ್ದರು. ಮುಂಬೈ ಇಂಡಿಯನ್ಸ್ ತನ್ನ ಮುಂದಿನ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ವಿರುದ್ಧ ಆಡಲಿದೆ.
ಬುಮ್ರಾ ಸಂಪೂರ್ಣ ಗುಣಮುಖರಾಗಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ವಿರುದ್ಧದ ಪಂದ್ಯದಲ್ಲಿ ಅಥವಾ ಐಪಿಎಲ್ ಸರಣಿಯಲ್ಲಿ ಆಡಲಿದ್ದಾರೆಯೇ ಅಥವಾ ಇಲ್ಲ ಎಂಬುದು ಪ್ರಮುಖ ಅಂಶವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


