ಐಪಿಎಲ್ 2019: ರಾಜಸ್ಥಾನ ರಾಯಲ್ಸ್ ವಿರುದ್ಧ ಪಂಜಾಬ್ ಗೆ 14 ರನ್ ರೋಚಕ ಜಯ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಹನ್ನೆರಡನೇ ಆವೃತ್ತಿಯ ಮೂರನೇ ದಿನದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ 14 ರನ್ ಅಂತರದ ಗೆಲುವು ಸಾಧಿಸಿದೆ.

Published On :
ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಹನ್ನೆರಡನೇ ಆವೃತ್ತಿಯ ಮೂರನೇ ದಿನದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ 14 ರನ್ ಅಂತರದ ಗೆಲುವು ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ರಾಜಸ್ಥಾನಕ್ಕೆ ಗೆಲ್ಲಲು 185 ರನ್ ಗುರಿ ನೀಡಿತ್ತು. ಆದರೆ ಗುರಿ ತಲುಪಲು ವಿಫಲವಾದ ರಾಜಸ್ಥನ ನಿಗದಿತ ಇಪ್ಪತ್ತು ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಲಷ್ಟೇ ಶಕ್ತವಾಗಿದೆ. ಇದೇ ವೇಳೆ ಸೋಲಿನ ದವಡೆಗೆ ಸಿಕ್ಕಿದ್ದ ಪಂಜಾಬ್ ಈ ಆವೃತ್ತಿಯ ಮೊದಲ ಪಂದ್ಯದಲ್ಲೇ ಗೆಲುವಿನ ಶುಭಾರಂಭ ಮಾಡಿದೆ.
ಇದಕ್ಕೆ ಮುನ್ನ ಪಂಜಾಬ್ ನಾಲ್ಕು ವಿಕೆಟ್ ನಷ್ಟಕ್ಕೆ 184ರನ್ ಕಲೆ ಹಾಕಿತ್ತು. ಪಂಜಾಬ್ ಪರವಾಗಿ ಸರ್ಫರಾಜ್ ಖಾನ್ (46) ರನ್ ಗಳಿಸಿ ಉತ್ತಮ ಪ್ರದರ್ಶನ ನೀಡಿದ್ದರೆ ಮಯಾಂಕ್ ಅಗರವಾಲ್ (22), ನಿಕೋಲಸ್ ಪೂರಮ್ (12), ನನದೀಪ್ ಸಿಂಗ್ (5) ರನ್ ಗಳಿಸಿದ್ದರು.
ಇನ್ನು ಪಂಜಾಬ್ ಪಡೆಗೆ ದಾಖಲೆಗಳ ಸರದಾರ ಬ್ಯಾಟಿಂಗ್ ದೈತ್ಯ ಕ್ರಿಸ್ ಗೇಲ್ ಸಹ ನೆರವಾಗಿದ್ದು ಗೇಲ್ 47 ಎಸೆತದಲ್ಲಿ 79 ರನ್ ಗಳಿಸಿದ್ದರು. ಅವರು ತಮ್ಮ ಇನ್ನಿಂಗ್ಸ್ ನಲ್ಲಿ ಒಟ್ಟು 4 ಸಿಕ್ಸರ್ ಹಾಗೂ 8 ಬೌಂಡರಿ ಸಿಡಿಸಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾದರು.
ಪಂಜಾಬ್ ನ ಗುರಿ ಬೆನ್ನತ್ತಿದ ರಾಜಸ್ಥಾನದ ಪರ ಜೋಸ್ ಬಟ್ಲರ್ (69), ಸಂಜು ಸಂಸನ್ ೯30), ರೆಹಾನೆ (27), ಸ್ಟೀವನ್ ಸ್ಮಿತ್ (27), ಹೊರತಾಗಿ ಇನ್ನಾರೂ ಎರಡಂಕಿ ತಲುಪಲಿಲ್ಲ.
ಬೌಲಿಂಗ್ ನಲ್ಲಿ ಸಹ ಉತ್ತಮ ಆಟ ಪ್ರದರ್ಶಿಸಿದ ಪಂಜಾಬ್ ಪರ ಎಸ್. ಕರನ್, ಮುಜೀಬ್ ಉಲ್ ರೆಹಮಾನ್, ಅಂಕಿತ್ ರಜಪೂತ್ ತಲಾ ಎರಡು ವಿಕೆಟ್ ಕಿತ್ತರೆ ರವಿಚಂದ್ರನ್ ಅಶ್ವಿನ್ ಒಂದು ವಿಕೆಟ್ ಗಳಿಸಿಕೊಂಡರು. ರಾಜಸ್ಥಾನದ ಪರವಾಗಿ ಬೆನ್ ಸ್ಟೋಕ್ಸ್ 2, ಧವಳ್ ಕುಕ್ಲಕರ್ಣಿ, ಕೃಷ್ಣಪ್ಪ ಗೌತಮ್ ತಲಾ ಒಂದೊಂದು ವಿಕೆಟ್ ಪಡೆಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


