ಐಪಿಎಲ್ ಪಂದ್ಯದ ವೇಳೆ ಚೌಕಿದಾರ್ ಚೋರ್ ಹೈ ಘೋಷಣೆಯ ವಿಡಿಯೋ ವೈರಲ್!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 2019ರ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ರಾಜಸ್ತಾನ್ ರಾಯಲ್ಸ್ ತಂಡಗಳ ನಡುವಿನ ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಪ್ರೇಕ್ಷಕರ ಗ್ಯಾಲರಿಯಿಂದ ಚೌಕಿದಾರ್ ಚೋರ್ ಹೈ...

Published On :
ಜೈಪುರ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 2019ರ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ರಾಜಸ್ತಾನ್ ರಾಯಲ್ಸ್ ತಂಡಗಳ ನಡುವಿನ ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಪ್ರೇಕ್ಷಕರ ಗ್ಯಾಲರಿಯಿಂದ ಚೌಕಿದಾರ್ ಚೋರ್ ಹೈ ಎಂಬ ಘೋಷಣೆ ಕೇಳಿಬಂದಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.
ಕಿಂಗ್ಸ್ ಇಲೆವೆನ್ ಪಂಜಾಬ್ 169 ರನ್ ಪೇರಿಸಿ ಬ್ಯಾಟಿಂಗ್ ಮಾಡುತ್ತಿದ್ದಾಗ 19ನೇ ಓವರ್ ನಲ್ಲಿ ಈ ಘೋಷಣೆ ಕೇಳಿಸಿತ್ತು. ಸದ್ಯ ಕ್ರಿಕೆಟ್ ಅಭಿಮಾನಿಗಳು ಚೌಕಿದಾರ್ ಚೋರ್ ಹೈ ಎಂಬ ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ರ್ಯಾಲಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚೌಕಿದಾರ್ ಚೋರ್ ಹೈ ಎಂದು ಪರೋಕ್ಷವಾಗಿ ಟಾಂಗ್ ನೀಡಿದ್ದು ಇದೀಗ ಅಭಿಮಾನಿಗಳು ಸಹ ಚೌಕಿದಾರ್ ಚೋರ್ ಹೈ ಎಂದು ಘೋಷಣೆ ಕೂಗಿರುವುದು ಸದ್ಯ ಚರ್ಚೆಗೆ ಗ್ರಾಸವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rajasthan Royalsಐಪಿಎಲ್ ಪಂದ್ಯಕಿಂಗ್ಸ್ ಇಲೆವೆನ್ ಪಂಜಾಬ್ರಾಜಸ್ತಾನ್ ರಾಯಲ್ಸ್Cricket Offbeatಕ್ರಿಕೆಟ್ ಸ್ವಾರಸ್ಯIPL 2019Chowkidar Chor HaiKing XI Punjabಚೌಕಿದಾರ್ ಚೋರ್ ಹೈ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


