ಐಪಿಎಲ್ 2019: ಮುಂಬೈ ವಿರುದ್ಧ ಆರ್‌ಸಿಬಿ ಗೆಲ್ಲಲು 188 ರನ್ ಗುರಿ
ಇಂಡಿಯನ್ ಪ್ರೀಮಿಯರ್ ಲೀಗ್ 2019ನೇ ಆವೃತ್ತಿಯ ಗುರುವಾರದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಆರ್‌ಸಿಬಿಗೆ 188 ರನ್ ಗೆಲುವಿನ ಗುರಿ ನೀಡಿದೆ.

Published On :
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2019ನೇ ಆವೃತ್ತಿಯ ಗುರುವಾರದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಆರ್‌ಸಿಬಿಗೆ 188 ರನ್ ಗೆಲುವಿನ ಗುರಿ ನೀಡಿದೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಪ್ರಾರಂಭಿಸಿದ್ದ ಮುಂಬೈ 20 ಓವರ್‌ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿದೆ.
ಮುಂಬೈ ಪರವಾಗಿ ನಾಯಕ ರೋಹಿತ್ ಶರ್ಮಾ (48), ಕ್ವಿಂಟನ್ ಡಿ ಕಾಕ್(23) , ಸೂರ್ಯಕುಮಾರ್ ಯಾದವ್ (38), ಯುವರಾಜ್ ಸಿಂಗ್ (23), ಹಾರ್ದಿಕ್ ಪಾಂಡ್ಯ (32) ರನ್ ಗಳಿಸಿ ತಂಡ ಉತ್ತಮ ಮೊತ್ತ ಕಲೆಹಾಕಲು ನೆರವಾದರು.
ಇನ್ನು ಹೋಂ ಪಿಚ್ ನಲ್ಲಿ ಈ ಆವೃತ್ತಿಯ ಮೊದಲ ಪಂದ್ಯವಾಡುತ್ತಿರುವ ಕೊಹ್ಲಿ ಬಳಗದ ಯುಜ್ವೆಂದ್ರ ಚಹಾಲ್ 4 ವಿಕೆಟ್ ಕಬಳಿಸಿ ಶ್ರೇಷ್ಠ ಬೌಲಿಂಗ್ ಪ್ರದರ್ಶನ ನೀಡಿದ್ದರು. ಇನ್ನು ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್ ತಲಾ 2 ವಿಕೆಟ್ ಪಡೆದರು.
ಎರಡೂ ತಂಡಗಳು ತಾವಾಡಿದ್ದ ಮೊದಲ ಪಂದ್ಯದಲ್ಲಿ ಎದುರಾಳಿಗಳಿಗೆ ಸೋತ ಕಾರಣ ಈ ಪಂದ್ಯದ ಘ್ಗೆಲುವು ಇತ್ತಂಡಗಳಿಗೆ ಮಹತ್ವದ್ದೆನಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


