ಕೊಹ್ಲಿ ಐಪಿಎಲ್‌ನಲ್ಲಿ 5 ಸಾವಿರ ರನ್ ದಾಖಲೆ, ಆರ್‌ಸಿಬಿ ವಿರುದ್ಧ ಮುಂಬೈಗೆ 6 ರನ್ ಗಳ ರೋಚಕ ಜಯ
ಇಂಡಿಯನ್ ಪ್ರೀಮಿಯರ್ ಲೀಗ್ 2019ನೇ ಆವೃತ್ತಿಯ ಗುರುವಾರದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 6 ರನ್ ಗಳ ರೋಚಕ ಜಯ ಸಾಧಿಸಿದೆ.

Published On :
ಬೆಂಗಳೂರು: ರಾಯಲ್ ಚಾಲೆಂಜರ್ಸ್ ನಾಯಕ ವಿರಾಟ್ ಕೊಹ್ಲಿ ಐಪಿಎಲ್ ನಲ್ಲಿ 5 ಸಾವಿರ ರನ್ ದಾಖಲೆ, ನಿರ್ಮಿಸುವಲ್ಲಿ ಯಶಸ್ವಿಯಾದರೂ ಆರ್‌ಸಿಬಿ ಮಾತ್ರ ಸೋಲಿನ ದವಡೆಯಿಂದ ಪಾರಾಗಲು ಸಾಧ್ಯವಾಗಿಲ್ಲ. ಇಂಡಿಯನ್ ಪ್ರೀಮಿಯರ್ ಲೀಗ್ 2019ನೇ ಆವೃತ್ತಿಯ ಗುರುವಾರದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 6 ರನ್ ಗಳ ರೋಚಕ ಜಯ ಸಾಧಿಸಿದೆ.
ಮುಂಬೈ ನೀಡಿದ್ದ 188 ರನ್ ಗುರಿ ಬೆನ್ನತ್ತಿದ ಕೊಹ್ಲಿ ಪಡೆ ಇಪ್ಪತ್ತು ಓವರ್ ಗಳಲ್ಲಿ5 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿದೆ. ಈ ಮೂಲಕ ಹೋಂ ಪಿಚ್ ನಲ್ಲಿ ಸಹ ರಾಯಲ್ ಚಾಲೆಂಜರ್ಸ್ ತಂಡಕ್ಕೆ ಗೆಲುವು ದಕ್ಕಲಿಲ್ಲ. ಅಲ್ಲದೆ ಐಪಿಎಲ್ ಹನ್ನೆರಡನೇ ಆವೃತ್ತಿಯಲ್ಲಿ ಕೊಹ್ಲಿ ಪಡೆ ಸತತ ಎರಡನೇ ಬಾರಿ ಸೋಲು ಕಂಡಿದೆ.
ಆರ್‌ಸಿಬಿ ಪರವಾಗಿ ನಾಯಕ ವಿರಾಟ್ ಕೊಹ್ಲಿ (46), ಎಬಿ ಡೆವಿಲ್ಲಿಯರ್ಸ್ (70), ಪಾರ್ಥಿವ್ ಪಟೇಲ್ (31), ಮೊಯೀನ್ ಅಲಿ (13) ರನ್ ಗಳಿಸಿ ಗಮನ ಸೆಳೆದರು.
ಇದರಲ್ಲಿಯೂ ಡೆವಿಲ್ಲಿಯರ್ಸ್ 6 ಸಿಕ್ಸರ್ ಹಾಗೂ 4 ಬೌಂಡರಿಗಳು ಸೇರಿ 41 ಎಸೆತಕ್ಕೆ 70 ರನ್ ಕಲೆಹಾಕಿದ್ದರು. ಇನ್ನು ನಾಯಕ ಕೊಹ್ಲಿ 6 ಬೌಂಡರಿ ಸಿಡಿಸಿ 32 ಬಾಲ್ ಗಳಿಗೆ 46 ರನ್ ಗಳಿಸಿದ್ದರು.
ಮುಂಬೈ ಪರ ಬುಮ್ರಾ 3, ಮಯಾಂಕ್ 1 ವಿಕೆಟ್ ಪಡೆದು ಮಿಂಚಿದ್ದರು.
ಇದಕ್ಕೆ ಮುನ್ನ ಬ್ಯಾಟಿಂಗ್ ನಡೆಸಿದ್ದ ಮುಂಬೈ ನಿಗದಿತ ಇಪ್ಪತ್ತು ಓವರ್ ನಲ್ಲಿ ಎಂಟು ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತ್ತು.
ಕೊಹ್ಲಿ 5000 ರನ್ ಮೈಲುಗಲ್ಲು
ಐಪಿಎಲ್ ನಲ್ಲಿ ಸುರೇಶ್ ರೈನಾ ಬಳಿಕ 5000 ರನ್ ಸಾಧನೆ ಮಾಡಿದ ಎರಡನೇ ಆಟಗಾರನಾಗಿ ವಿರಾಟ್ ಕೊಹ್ಲಿ ಹೆಸರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Royal Challengers BangaloreAB de Villiersರಾಯಲ್ ಚಾಲೆಂಜರ್ಸ್ ಬೆಂಗಳೂರುMumbai Indiansಮುಂಬೈ ಇಂಡಿಯನ್ಸ್ಎಬಿ ಡಿ ವಿಲ್ಲಿಯರ್ಸ್IPL 2019ಐಪಿಎಲ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


