ಐಪಿಎಲ್ 2019: ಕೆಕೆಆರ್ ವಿರುದ್ಧ ಡೆಲ್ಲಿಗೆ 3 ರನ್ ಗಳ 'ಸೂಪರ್' ಗೆಲುವು
ಪೃಥ್ವಿ ಶಾ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಶನಿವಾರ ಮೂರು ರನ್ ಗಳ ಸೂಪರ್ ಗೆಲುವು...

Published On :
ದೆಹಲಿ: ಪೃಥ್ವಿ ಶಾ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಶನಿವಾರ ಮೂರು ರನ್ ಗಳ ಸೂಪರ್ ಗೆಲುವು ಸಾಧಿಸಿದೆ.
ಇಂದು ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 185 ರನ್ ಸೇರಿಸಿತು.
ಗೆಲುವಿಗೆ 186 ರನ್ ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪೃಥ್ವಿ ಶಾ ಅವರ 99 ರನ್ ಗಳ ನೆರವಿನೊಂದಿಗೆ ಆರು ವಿಕೆಟ್ ನಷ್ಟಕ್ಕೆ 185 ರನ್ ಗಳಿಸಲಷ್ಟೇ ಶಕ್ತವಾಯಿತು. ಪರಿಣಾಮ ಐಪಿಎಲ್ 2019ರಲ್ಲಿ ಮೊದಲ ಬಾರಿಗೆ ರೋಚಕ 'ಟೈ' ದಾಖಲಾಯಿತು. ಬಳಿಕ ವಿಜೇತರನ್ನು ಸೂಪರ್ ಓವರ್‌ನಲ್ಲಿ ನಿರ್ಧರಿಸಲಾಯಿತು.
ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್, ಒಂದು ವಿಕೆಟ್ ನಷ್ಟಕ್ಕೆ 10 ರನ್ ಗಳಿಸಿತ್ತು. ಬಳಿಕ 11 ರನ್‌ಗಳ ಗುರಿ ಬೆನ್ನಟ್ಟಿದ ಕೆಕೆಆರ್ ಒಂದು ವಿಕೆಟ್ ನಷ್ಟಕ್ಕೆ 7 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಐಪಿಎಲ್ 2019ರಲ್ಲಿ ದಾಖಲಾದ ಮೊದಲ 'ಟೈ' ಪಂದ್ಯದಲ್ಲಿ ಡೆಲ್ಲಿ ಸೂಪರ್ ಗೆಲುವು ದಾಖಲಿಸಿತು.
ಆರಂಭದಲ್ಲೇ ತನ್ನ ಪ್ರಮುಖ ವಿಕೆಟ್ಗಳನ್ನು ಕಳೆದುಕೊಂಡ ಕೆಕೆಆರ್, ಓಪನರ್ಗಳಾದ ನಿಖಿಲ್ 7 ಹಾಗೂ ಕ್ರಿಸ್ ಲಿನ್ 20 ರನ್ಗೆ ಔಟ್ ಆದರೆ, ರಾಬಿನ್ ಉತ್ತಪ್ಪ(11), ನಿತೀಶ್ ರಾಣಾ(1) ಹಾಗೂ ಶುಭ್ಮನ್ ಗಿಲ್(4) ಬೇಗನೆ ಪೆವಿಲಿಯನ್ ಹಾದಿ ಹಿಡಿದರು. ಹೀಗೆ ಕೆಕೆಆರ್ 9 ಓವರ್ ಆಗುವ ಹೊತ್ತಿಗೆ ಪ್ರಮುಖ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


