ಆಡಿದ್ದು ಒಂದೇ ಪಂದ್ಯ; ಐಪಿಎಲ್‍ನಿಂದ ಹೊರಬಿದ್ದ 8.4 ಕೋಟಿಗೆ ಬಿಕರಿಯಾಗಿದ್ದ ಆಟಗಾರ!
12ನೇ ಆವೃತ್ತಿಯ ಐಪಿಎಲ್ ನಲ್ಲಿ 8.4 ಕೋಟಿ ರುಪಾಯಿಗೆ ಬಿಕರಿಯಾಗಿದ್ದ ಕಿಂಗ್ಸ್ ಇಲೆವೆನ್ ತಂಡದ ಆಟಗಾರ ಒಂದೇ ಒಂದು ಪಂದ್ಯ ಆಡಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.

Published On :
ಪಂಜಾಬ್: 12ನೇ ಆವೃತ್ತಿಯ ಐಪಿಎಲ್ ನಲ್ಲಿ 8.4 ಕೋಟಿ ರುಪಾಯಿಗೆ ಬಿಕರಿಯಾಗಿದ್ದ ಕಿಂಗ್ಸ್ ಇಲೆವೆನ್ ತಂಡದ ಆಟಗಾರ ಒಂದೇ ಒಂದು ಪಂದ್ಯ ಆಡಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ತಮಿಳುನಾಡು ಮೂಲದ ವರುಣ್ ಚಕ್ರವರ್ತಿಯನ್ನು ಕಿಂಗ್ಸ್ ಇಲೆವೆನ್ ಪಂಜಾಬ್ ಫ್ರಾಂಚೈಸಿ 8.4 ಕೋಟಿ ರುಪಾಯಿಗೆ ಖರೀದಿಸಿತ್ತು. ಆದರೆ ಆವೃತ್ತಿಯಲ್ಲಿ ವರುಣ್ ಆಡಿದ್ದು ಕೇವಲ ಒಂದು ಪಂದ್ಯ ಮಾತ್ರ. ಅಷ್ಟರಲ್ಲೇ ಗಾಯದ ಸಮಸ್ಯೆಗೆ ತುತ್ತಾಗಿ ಟೂರ್ನಿಯಿಂದ ಹೊರಹೋಗಿದ್ದಾರೆ.
ಆ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 3 ಓವರ್ ಬೌಲಿಂಗ್ ಮಾಡಿದ್ದ ವರುಣ್ 35 ರನ್ ನೀಡಿ 1 ವಿಕೆಟ್ ಕಬಳಿಸಿದ್ದರು. ಬಳಿಕ ಗಾಯದ ಸಮಸ್ಯೆಗೆ ತುತ್ತಾಗಿದ್ದರು. ಇನ್ನು ಚೇತರಿಸಿಕೊಳ್ಳದ ಕಾರಣ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Kings XI Punjabಕಿಂಗ್ಸ್ ಇಲೆವೆನ್ ಪಂಜಾಬ್Cricket Offbeatಕ್ರಿಕೆಟ್ ಸ್ವಾರಸ್ಯIPL 2019ಐಪಿಎಲ್ 2019ವರುಣ್ ಚಕ್ರವರ್ತಿVarun Chakravarthy
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


