ಸಿಎಸ್‌ಕೆ ಅಭಿಮಾನಿಗಳಿಗೆ ಧನ್ಯವಾದ: 'ತಲಾ' ಬಿರುದು ನನಗೆ ಸಿಕ್ಕ ಅತಿದೊಡ್ಡ ಉಡುಗೊರೆ!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 80 ರನ್ ಗಳಿಂದ ಗೆದ್ದು ಬೀಗಿದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

Published On :
ಚೆನ್ನೈ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 80 ರನ್ ಗಳಿಂದ ಗೆದ್ದು ಬೀಗಿದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಈ ಮಧ್ಯೆ ತಂಡದ ನಾಯಕ ಎಂಎಸ್ ಧೋನಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ಚೆನ್ನೈ ತಂಡವನ್ನು ಮುನ್ನಡೆಸುವಾಗ ನನಗೆ ಹೆಮ್ಮೆ ಅನಿಸುತ್ತದೆ. ಇಲ್ಲಿ ನನಗೆ ಅಪಾರ ಗೌರವ ಸಿಕ್ಕಿದೆ. ಅಲ್ಲದೆ ಇಲ್ಲಿನ ಅಭಿಮಾನಿಗಳು ನನಗೆ ತಲಾ(ಅಧಿನಾಯಕ) ಎಂದು ಬಿರುದು ನೀಡಿದ್ದು ನನಗೆ ಅದು ತುಂಬಾ ಸಂತೋಷ ನೀಡಿದೆ. ಅಲ್ಲದೆ ಕ್ರೀಡಾಂಗಣದಲ್ಲಿ ನಾನು ಆಡುವಾಗ ಅಭಿಮಾನಿಗಳು ತಲಾ ಎಂದು ಕರೆಯುತ್ತಾರೆ. ಇನ್ನು ಟಿವಿ ಮೂಲಕ ಪ್ರಪಂಚದ ಕೋಟ್ಯಾಂತರ ಜನ ಐಪಿಎಲ್ ಪಂದ್ಯಗಳನ್ನು ವೀಕ್ಷಿಸುತ್ತಾರೆ. ಅದು ನನಗೆ ಸಿಕ್ಕ ಗೌರವ ಎಂದು ಹೇಳಿದ್ದಾರೆ.
ತಮಿಳುನಾಡಿನಾದ್ಯಂತ ನನ್ನ ಹೆಸರಿನಿಂದ ಕರೆಯುವುದಿಲ್ಲ. ಬದಲಿಗೆ ತಲಾ ಎಂದು ಕರೆಯುತ್ತಾರೆ. ಇದೇ ನನಗೆ ದೊಡ್ಡ ಉಡುಗೊರೆ. ಅವರ ಅಭಿಮಾನಕ್ಕೆ ನಾನು ಚಿರಋಣಿ ಎಂದು ಹೇಳಿದ್ದಾರೆ.
ಅಗ್ರಸ್ಥಾನಕ್ಕಾಗಿ ನಿನ್ನೆ ಡೆಲ್ಲಿ ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 80 ರನ್ ಗಳಿಂದ ಗೆಲುವು ಸಾಧಿಸಿತು.
The name #Thala is very special and I'm thankful to the fans for the love bestowed on me
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MS Dhoniಎಂಎಸ್ ಧೋನಿCricket Offbeatಕ್ರಿಕೆಟ್ ಸ್ವಾರಸ್ಯIPL 2019ಐಪಿಎಲ್ 2019CSK fansThalaಸಿಎಸ್‌ಕೆ ಅಭಿಮಾನಿತಲಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


